ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಮಾಯಕರ ಕೊಲೆ, ಸಮುದಾಯದ ಅವಹೇಳನ ಇದೆಲ್ಲವನ್ನು ಖಂಡಿಸಿ ಹಲವಾರು ಬಾರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈ ಗೊಳ್ಳದೆ ನಿರ್ಲಕ್ಷ್ಯ ತೋರಿದರಿಂದ ದಿನದಿಂದ ದಿನಕ್ಕೆ ಜಿಲ್ಲೆ ಹಾಗೂ ರಾಜ್ಯದ ಕೆಲ ಭಾಗಗಲ್ಲಿ ಮುಸ್ಲಿಂ ಸಮುದಾಯ ಹಲವಾರು ಸಂಕಷ್ಟಗಳನ್ನು ಎದುರಿಸುವ ಪರಿಸ್ಥಿತಿ ಬಂದಿದೆ.
ಮುಸ್ಲಿಂ ಸಮುದಾಯದ 80% ಮತ ಪಡೆದು ರಚನೆಯಾಗಿರುವ ಸರಕಾರದಿಂದ ಈ ಸಮುದಾಯಕ್ಕೆ 10% ಸುರಕ್ಷತೆ ನೀಡಲು ಸಾಧ್ಯವಿಲ್ಲ ಎಂದಾದರೆ ನಾವು ಪಕ್ಷದಲ್ಲಿ ಮುಂದುವರಿಯುವುದರಲ್ಲಿ ಪ್ರಯೋಜನವಿಲ್ಲ. ನಾಯಕರು ಎಂದು ಅಂದುಕೊಂಡವರು ರಾಜಕೀಯ ಲಾಭಕೋಸ್ಕರ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಯಾವುದೇ ಮನವಿಯನ್ನು ಕೂಡ ಗಂಭೀರವಾಗಿ ಪರಿಗಣಿಸುತಿಲ್ಲ.
ಮುಂದಿನ ಶುಕ್ರವಾರ ಅಂದರೆ ಮೇ 30 ರಂದು ಮಧ್ಯಾಹ್ನ 3 ಗಂಟೆಗೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜೀನಾಮೆ ನೀಡುವುದಾಗಿ ತೀರ್ಮಾನಿಸಲಾಯಿತು.