tamanvi
ಕರಾವಳಿ

ದ.ಕ. ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಅರುಣ್ ಕೆ.‌| ಅಪರಾಧ ಪ್ರಕರಣಗಳ ಬಗ್ಗೆ ಮೊದಲ ಪ್ರತಿಕ್ರಿಯೆ…

GL
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ಡಾ. ಅರುಣ್ ಕೆ. ವಹಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ಡಾ. ಅರುಣ್ ಕೆ. ವಹಿಸಿಕೊಂಡಿದ್ದಾರೆ.

ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು.

ಅಕ್ರಮ ಗೋಹತ್ಯೆ/ ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ ಮಾರಾಟ/ ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ತನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿಗೆ ಸಂಖ್ಯೆ: 0824- 2220503ಗೆ ಮಾಹಿತಿ ನೀಡಬಹುದು ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts