tamanvi
ಕರಾವಳಿ

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು, ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು, ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು.ಗುಪ್ತಚರ ಇಲಾಖೆಯ ಡಿಐಜಿ ಆಗಿ ಕಾರ್ಯನಿರ್ವಹಿಸಿದ್ದರು. ಆಂಧ್ರಪ್ರದೇಶದ ಗುಂಟೂರು ಮೂಲದ ಸುಧೀರ್ ಕುಮಾರ್ ರೆಡ್ಡಿ 2017-18ರಲ್ಲಿ ದ.ಕ.ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

ನನಗೆ ಗೊತ್ತಿರುವುದು ಒಂದೇ ‘ಅದು ಕಾನೂನು’. ಅದರಲ್ಲಿ ಒಬ್ಬರಿಗೆ ಒಂದು ರೀತಿ, ಇನ್ನೊಬ್ಬರಿಗೆ ಇನ್ನೊಂದು ರೀತಿ ಎಂದಿಲ್ಲ, ಅದು ಎಲ್ಲರಿಗೂ ಒಂದೇ ಎಂದು ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಶುಕ್ರವಾರ ಸಂಜೆ ನಿರ್ಗಮಿತ ಕಮಿಷನರ್ ಅನುಪಮ್ ಅಗ್ರವಾಲ್ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಈಗ ತಾನೇ ಅಧಿಕಾರ ವಹಿಸಿಕೊಂಡಿದ್ದೇನೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮೊದಲು ಮಾಡುತ್ತೇನೆ. ನಗರದ ಜನತೆಗೆ ಯಾವ ಅನುಮಾನವೂ ಬೇಡ. ಕಾನೂನು ಏನು ಹೇಳುತ್ತದೋ ಅದರ ಪ್ರಕಾರವೇ ನಾನು ನಡೆಯುವುದು. ಬೇರೇನೂ ನನಗೆ ಗೊತ್ತಿಲ್ಲ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…