ಕರಾವಳಿ

ಕಣಚೂರು ವೈದ್ಯಕೀಯ ಕಾಲೇಜಿಗೆ ಬಾಂಬ್ ಬೆದರಿಕೆಯ ಅಸಲಿಯತ್ತು ಬಯಲು!! ವಿದ್ಯಾರ್ಥಿನಿ ಅರೆಸ್ಟ್!

ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬಾಂಬು ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು/ಉಳ್ಳಾಲ: ನಾಟೆಕಲ್‌ನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬಾಂಬು ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.

akshaya college

ಬಂಧಿತ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿರುವ ಚಲಸಾನಿ ಮೋನಿಕಾ ಚೌಧರಿ ಎನ್ನಲಾಗಿದೆ.

ಏನಿದು ಘಟನೆ

ಜೂನ್ 4 ರಂದು ಇಲ್ಲಿನ ನಾಟೆಕಲ್‌ನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬೆಳಿಗ್ಗೆ 8:45 ರ ಸುಮಾರಿಗೆ ಕರೆಯೊಂದು ಬಂದಿದ್ದು ಅದರಂತೆ ಹನ್ನೊಂದು ಗಂಟೆಯೊಳಗೆ ಕಾಲೇಜು ಖಾಲಿ ಮಾಡಿ ಇಲ್ಲವಾದಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಸುಮಾರು ಐದು ಬಾರಿ ಬೆದರಿಕೆ ಕರೆಗಳು ಬಂದಿತ್ತು ಎನ್ನಲಾಗಿದೆ. ಈ ಕುರಿತು ಕಾಲೇಜಿನ ಪಿ.ಜಿ. ವಿದ್ಯಾರ್ಥಿನಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ ಇದಾದ ಬಳಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳು ಉಳ್ಳಾಲ ಪೊಲೀಸ್‌ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ ಅದರಂತೆ ಕಾರ್ಯಪ್ರವೃತ್ತರಾದ ಪೊಲೀಸರು, ಶ್ವಾನ ದಳ, ಬಾಂಚ್ ನಿಷ್ಕ್ರಿಯ ತಂಡ ಸೇರಿ ಕಾಲೇಜಿಗೆ ಧಾವಿಸಿ ಇಡೀ

ಆಸ್ಪತ್ರೆಯ ಆಡಳಿತಾಧಿಕಾರಿಗಳು ಉಳ್ಳಾಲ ಪೊಲೀಸ್‌ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ ಅದರಂತೆ ಕಾರ್ಯಪ್ರವೃತ್ತರಾದ ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ತಂಡ ಸೇರಿ ಕಾಲೇಜಿಗೆ ಧಾವಿಸಿ ಇಡೀ ಆಸ್ಪತ್ರೆಯ ಪ್ರದೇಶವನ್ನು ಪರಿಶೀಲನೆ ನಡೆಸಿದ್ದಾರೆ ಆದರೆ ಎಲ್ಲೂ ಸ್ಫೋಟಕ ವಸ್ತುಗಳು ಪತ್ತೆಯಾಗಲಿಲ್ಲ.

ಘಟನೆಯಿಂದ ಆಸ್ಪತ್ರೆಯ ಸಿಬ್ಬಂದಿಗಳು, ರೋಗಿಗಳು ಆತಂಕಕ್ಕೆ ಒಳಗಾಗಿದ್ದರು ಕೊನೆಗೆ ಪರಿಶೀಲನೆ ನಡೆಸಿದ ಪೊಲೀಸರು ಇದೊಂದು ಹುಸಿ ಬಾಂಬ್ ಕರೆ ಎಂದು ಸಮಾಧಾನ ಪಡಿಸಿ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ವಿಶೇಷ ತಂಡ ರಚಿಸಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು,

ಫೋನ್ ಕರೆ ಸ್ವೀಕರಿಸಿದಾಕೆಯೇ ಆರೋಪಿ:

ನಡೆಸಿದ ವಿಶೇಷ ತಂಡಕ್ಕೆ ಯಾವುದೇ ಸುಳಿವು ಸಿಗದೇ ಇದ್ದಾಗ ಆಸ್ಪತ್ರೆಯಲ್ಲಿ ಫೋನ್ ಕರೆಯನ್ನು ಸ್ವೀಕರಿಸಿದ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ ಮೊದಲು ಪೊಲೀಸರ ದಿಕ್ಕು ತಪ್ಪಿಸುತ್ತಿದ್ದ ಆಕೆ ಕೊನೆಗೆ ತಾನೇ ಕೃತ್ಯ ಎಸಗಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಾಳೆ.

ಸೆಮಿನಾ‌ರ್ ತಪ್ಪಿಸಲು ಬಾಂಬ್ ಬೆದರಿಕೆ:

ಪೊಲೀಸರು ನಡೆಸಿದ ವಿಚಾರಣೆ ವೇಳೆ ಪಿ.ಜಿ. ವಿದ್ಯಾರ್ಥಿನಿ ಅದೇ ದಿನ ಕಾಲೇಜಿನಲ್ಲಿ ಸೆಮಿನಾರ್ ನೀಡಬೇಕಿದ್ದು ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಬಾಂಬ್ ಬೆದರಿಕೆಯ ನಾಟಕವಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಸದ್ಯ ಪೊಲೀಸರು ಆಕೆಯನ್ನು ಬಂಧಿಸಿದ್ದು ಆಕೆಯ ಬಳಿಯಿದ್ದ ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…