tamanvi
ಕರಾವಳಿ

ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ‘ಗ್ಲೋಬಲ್‌ ಅಚೀವರ್ಸ್’ ಪ್ರಶಸ್ತಿ

D_shiva_bhat
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೊಸದಿಲ್ಲಿಯ ಫ್ರೆಂಡ್‌ಶಿಪ್ ಫೋರಂ ನೀಡುವ ಪ್ರತಿಷ್ಠಿತ 'ಗ್ಲೋಬಲ್‌ ಅಚೀವರ್ಸ್' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೊಸದಿಲ್ಲಿಯ ಫ್ರೆಂಡ್‌ಶಿಪ್ ಫೋರಂ ನೀಡುವ ಪ್ರತಿಷ್ಠಿತ ‘ಗ್ಲೋಬಲ್‌ ಅಚೀವರ್ಸ್’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

maithri

ಸಹಕಾರ, ಬ್ಯಾಂಕಿಂಗ್‌ ಮತ್ತು ಸಮಾಜಸೇವೆಯಲ್ಲಿ ಅವರ ಅನುಪಮ ಕೊಡುಗೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.

31 ವರ್ಷಗಳ ಸಹಕಾರ ಸೇವೆ:

ಡಾ. ರಾಜೇಂದ್ರ ಕುಮಾರ್ ಅವರು ಕಳೆದ 31 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಅವಧಿಯಲ್ಲಿ ಬ್ಯಾಂಕನ್ನು ರಾಷ್ಟ್ರೀಯ ಮಟ್ಟದ ಬ್ಯಾಂಕ್‌ಗಳಿಗೆ ಸಮಾನವಾಗಿ ಉನ್ನತೀಕರಿಸಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರಿಗೆ ಬ್ಯಾಂಕಿಂಗ್‌ ಸೇವೆಯನ್ನು ಸಮರ್ಥವಾಗಿ ತಲುಪಿಸಿದ್ದಾರೆ. ಅವರ ನಾಯಕತ್ವದಲ್ಲಿ ಬ್ಯಾಂಕ್‌ ಕಳೆದ 18 ವರ್ಷಗಳಿಂದ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಿಂದ `ಅತ್ಯುತ್ತಮ ಕೇಂದ್ರ ಸಹಕಾರಿ ಬ್ಯಾಂಕ್’ ಪ್ರಶಸ್ತಿ ಮತ್ತು ನಬಾರ್ಡ್ ಪ್ರಶಸ್ತಿಯನ್ನು ಸತತವಾಗಿ ಪಡೆದಿದೆ.

ನವೋದಯ ಸ್ವಸಹಾಯ ಸಂಘಗಳ ಮೂಲಕ ಸಶಕ್ತಿಕರಣ:

ಡಾ. ರಾಜೇಂದ್ರ ಕುಮಾರ್ ಅವರು ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಮಹಿಳಾ ಸಶಕ್ತಿಕರಣಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ. ಈ ಸಂಘಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಚೈತನ್ಯ ತುಂಬಿ, ಆರ್ಥಿಕ ಸ್ವಾವಲಂಬನೆಗೆ ದಾರಿ ಮಾಡಿಕೊಟ್ಟಿದ್ದಾರೆ. ಇದರಿಂದಾಗಿ ಸಾವಿರಾರು ಕುಟುಂಬಗಳು ಆರ್ಥಿಕವಾಗಿ ಸದೃಢವಾಗಿವೆ.

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳು:

ಡಾ. ರಾಜೇಂದ್ರ ಕುಮಾರ್ ಅವರಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕ ಸರ್ಕಾರದಿಂದ ‘ಸಹಕಾರ ರತ್ನ’ ಪ್ರಶಸ್ತಿ. ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯ ಮತ್ತು ಮಂಗಳೂರು ವಿಶ್ವವಿದ್ಯಾಲಯದಿಂದ ‘ಗೌರವ ಡಾಕ್ಟರೇಟ್’, ‘ವಿಶ್ವ ಬಂಧುಶ್ರೀ’, ‘ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ’, ‘ಮಹಾತ್ಮ ಗಾಂಧಿ ಸಮ್ಮಾನ್’, ‘ಬೆಸ್ಟ್‌ ಚೇರ್‌ಮೆನ್ ನ್ಯಾಶನಲ್ ಅವಾರ್ಡ್ ಮತ್ತು ‘ನ್ಯಾಶನಲ್‌ ಎಕ್ಸಲೆನ್ಸ್‌ ಅವಾರ್ಡ್‌ ಔಟ್‌ಸ್ಟಾಂಡಿಂಗ್ ಗ್ಲೋಬಲ್‌ ಲೀಡರ್‌ಶಿಪ್ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಒಲಿದಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…