Gl
ಕರಾವಳಿ

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ "ಬ್ರಾಂಡ್ ಮಂಗಳೂರು" ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2 ರಂದು ಪ್ರಕಟವಾದ “ಹುಲಿ ವೇಷಕ್ಕೆ ಖದರ್‌ ನೀಡಿದ್ದ ಆಸಿಫ್” ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ.

akshaya college

ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ..

ಸಿಸಿಆ‌ರ್ ಬಿ ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಬ್ರಾಂಡ್ ಮಂಗಳೂರು ಪ್ರಶಸ್ತಿ ತೀರ್ಪು ಗಾರರಾಗಿದ್ದರು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಚಯ: ಹೊಸದಿಗಂತ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿ ವಿಜಯ ಕರ್ನಾಟಕದಲ್ಲಿ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. 2019-20ನೇ ಸಾಲಿನ ಪ.ಗೋ. ಪ್ರಶಸ್ತಿ, 2022ರಲ್ಲಿ ಕಲಬುರಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ `ಅಭಿಮಾನಿ ದತ್ತಿ ಪ್ರಶಸ್ತಿ’ ಲಭಿಸಿದೆ. ಇವರು ನೀರುಮಾರ್ಗ ಪಡು ಬೊಂಡಂತಿಲ ಗ್ರಾಮದ ಗೋಪಾಲ ಪೂಜಾರಿ ಮತ್ತು ಕಮಲ ದಂಪತಿಯ ಪುತ್ರ.

ಪ್ರಶಸ್ತಿ ಪ್ರದಾನ ಸಮಾರಂಭ: ಜೂ.25ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಭವನದಲ್ಲಿ ಮಂಗಳೂರು ಪೊಲೀಸ್‌ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡುವರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆ‌ರ್. ಉಪಸ್ಥಿತರಿರುವರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…