ಮಂಗಳೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಸೋಮವಾರ (ಜು.14) ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮರಳು ನೀತಿ ಮಾಡುವುದಾಗಿ ಕಾಂಗ್ರೆಸ್ ನೀಡಿದ ಭರವಸೆ ಈಡೇರಿಸಿಲ್ಲ. ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಎಲ್ಲ ವ್ಯಾಪಾರಸ್ಥರ ಮೇಲೆಯೂ ಪರಿಣಾಮ ಬಿದ್ದಿದೆ. ಮನೆ ಕಟ್ಟುವವರಿಗೆ ಕಲ್ಲು, ಮರಳು ಸಿಗುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ರಮೇಶ್ ಕಂಡೆಟ್ಟು, ಸುಧೀರ್ ಶೆಟ್ಟಿ ಕಣ್ಣೂರು, ದಿವಾಕರ ಪಾಂಡೇಶ್ವರ, ಮೋನಪ್ಪ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.