tamanvi
ಕರಾವಳಿ

ಕೆಂಪು ಕಲ್ಲು, ಮರಳು ಸಮಸ್ಯೆ: ಪರಿಹಾರಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ| ಕಾರ್ಮಿಕರು ಬೀದಿ ಪಾಲು, ಕಾಂಗ್ರೆಸ್ ಭರವಸೆ ಸುಳ್ಳು: ಕುಂಪಲ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಸೋಮವಾರ (ಜು.14) ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮರಳು ನೀತಿ ಮಾಡುವುದಾಗಿ ಕಾಂಗ್ರೆಸ್ ನೀಡಿದ ಭರವಸೆ ಈಡೇರಿಸಿಲ್ಲ. ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಎಲ್ಲ ವ್ಯಾಪಾರಸ್ಥರ ಮೇಲೆಯೂ ಪರಿಣಾಮ ಬಿದ್ದಿದೆ. ಮನೆ ಕಟ್ಟುವವರಿಗೆ ಕಲ್ಲು, ಮರಳು ಸಿಗುತ್ತಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ರಮೇಶ್ ಕಂಡೆಟ್ಟು, ಸುಧೀರ್ ಶೆಟ್ಟಿ ಕಣ್ಣೂರು, ದಿವಾಕರ ಪಾಂಡೇಶ್ವರ, ಮೋನಪ್ಪ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…