ಕರಾವಳಿ

ಪುತ್ತೂರು: ನಾಳೆ (ಜು. 17) ಶಾಲೆಗಳಿಗೆ ರಜೆ ಘೋಷಣೆ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 17, 2025 ರಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

core technologies

ತಾಲೂಕು ತಹಶೀಲ್ದಾರರ ಕಾರ್ಯಾಲಯದಿಂದ ಜಾರಿಗೊಂಡಿರುವ ಪ್ರಕಟಣೆಯ ಪ್ರಕಾರ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಈ ನಿರ್ಧಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ.

akshaya college

ಸಾರ್ವಜನಿಕರಿಗೆ ಹಾಗೂ ಪಾಲಕರಿಗೆ ಎಚ್ಚರಿಕೆ ಸೂಚನೆ:

ತಗ್ಗು ಪ್ರದೇಶ, ಕೆರೆ, ನದಿತೀರ, ಕಾಲುವೆ, ತೋಡುಗಳ ಹತ್ತಿರ ಮಕ್ಕಳನ್ನು ಕಳುಹಿಸದಂತೆ ಪಾಲಕರಿಗೆ ಎಚ್ಚರಿಕೆ ನೀಡಲಾಗಿದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ಕೂಡ ನದಿತೀರ ಮತ್ತು ಇತರ ಜಲಾಶಯಗಳ ಹತ್ತಿರ ತೆರಳಬಾರದು ಎಂಬ ಸೂಚನೆಯೂ ನೀಡಲಾಗಿದೆ.

ವಿಪತ್ತು ನಿರ್ವಹಣೆಗೆ ತಹಶೀಲ್ದಾರರ ಆದೇಶ:

ಎಲ್ಲಾ ಗ್ರಾಮ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಳದಲ್ಲೇ ಲಭ್ಯವಿದ್ದು ವಿಪತ್ತು ನಿರ್ವಹಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು.

ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ನೇಮಕಗೊಂಡಿರುವ Incident Commander ಗಳು ಸದಾ ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.

ಸಂಬಂಧಪಟ್ಟ ಇಲಾಖೆಯವರು ಪುತ್ತೂರು ಮತ್ತು ಉಪ್ಪಿನಂಗಡಿ ಹೋಬಳಿಯಲ್ಲಿರುವ ಕಾಳಜಿ ಕೇಂದ್ರಗಳನ್ನು ಕಾರ್ಯನಿರತ ಸ್ಥಿತಿಯಲ್ಲಿ ಇರಿಸಬೇಕು.

ಸಹಾಯವಾಣಿ:
ಪ್ರಾಕೃತಿಕ ವಿಕೋಪ ಹಾಗೂ ತುರ್ತು ಪರಿಸ್ಥಿತಿಗಳ ಸಂಬಂಧ ಯಾವುದೇ ಮಾಹಿತಿ ಅಥವಾ ಸಹಾಯಕ್ಕಾಗಿ ಪುತ್ತೂರು ತಾಲೂಕು ಕಛೇರಿಯ ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು: 08251-230349
ಇಮೇಲ್: tah.puttur@gmail.com


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ…

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…