ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಬಳಿಕ ಮುಂಜಾಗ್ರತಾ ಕ್ರಮವಾಗಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ.
ಕಳೆದ 24 ಗಂಟೆಗಳಲ್ಲಿ ನಿರಂತರ ಭಾರಿ ಮಳೆಯಾಗಿದ್ದು, ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದಾಗಿ ಸೂಚಿಸಿದೆ.
ಜಿಲ್ಲಾ ಆಡಳಿತ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಕಟಿಸಿದ ತುರ್ತು ಕ್ರಮಗಳು ಹೀಗಿವೆ:
📌 ಜುಲೈ 25 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ, ಪಿಯು ಕಾಲೇಜುಗಳು ಹಾಗೂ ಖಾಸಗಿ-ಸರ್ಕಾರಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ
📌 ನದಿ, ಕೆರೆ, ಸಮುದ್ರ ತೀರಗಳಿಗೆ ಮಕ್ಕಳು ಅಥವಾ ಸಾರ್ವಜನಿಕರು ಹೋಗದಂತೆ ಪೋಷಕರು ಮತ್ತು ಸಾರ್ವಜನಿಕರಿಗೆ ಎಚ್ಚರಿಕೆ
📌 ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ
📌 ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರದಲ್ಲೇ ಇರುತ್ತಂತೆ ಆದೇಶ
📌 ನೋಡಲ್ ಅಧಿಕಾರಿಗಳು ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ಸ್ಪಂದನೆ ನೀಡುವುದು, ಹಾಗೂ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು
📌 ಪ್ರವಾಸಿಗರಿಗೆ ನದಿತೀರ, ಸಮುದ್ರತೀರದ ಕಡೆಗೆ ಪ್ರವೇಶಕ್ಕೆ ನಿರ್ಬಂಧ
📌 ಪ್ರತೀ ತಾಲೂಕಿನಲ್ಲಿ ಕಾಳಜಿ ಕೇಂದ್ರ ತೆರೆಯಲು ಸಂಬಂಧಿತ ಇಲಾಖೆಗೆ ಸೂಚನೆ
🔸 ಯಾವುದೇ ತುರ್ತು ಪರಿಸ್ಥಿತಿಗೆ ಟೋಲ್ ಫ್ರೀ 1077 ಅಥವಾ 0824-2442590 ಸಂಪರ್ಕಿಸಿ.
ಭದ್ರತೆಗಾಗಿ ಇವು ಎಲ್ಲಾ ನಾಗರಿಕರು ಪಾಲಿಸಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.