ಕರಾವಳಿ

ಸಾರ್ವಜನಿಕ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಕೆ: ಮುಟ್ಟುಗೋಲು | ಪತ್ರಿಕಾಗೋಷ್ಠಿ ನಡೆಸಿದ ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಸಂಘ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಒದಗಿಸುವ ಧ್ವನಿವರ್ಧಕ ವ್ಯವಸ್ಥೆಯನ್ನು ಪೊಲೀಸರು ತಡೆಹಿಡಿಯುತ್ತಿರುವುದರಿಂದ ಸಮಸ್ಯೆಯಾಗಿದೆ. ಆ. 21ರಿಂದಲೇ ಅನ್ವಯವಾಗುವಂತೆ ಈ ಸಮಸ್ಯೆ ಇತ್ಯರ್ಥಪಡಿಸುವವರೆಗೆ ನಾವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡದಿರಲು ನಿರ್ಧರಿಸಿದ್ದೇವೆ ಎಂದು ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಸಂಘದವರು ತಿಳಿಸಿದ್ದಾರೆ.

akshaya college

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಧನರಾಜ್ ಶೆಟ್ಟಿ ಅವರು, ಒಂದು ವಾರದಿಂದ ಅಲ್ಲಲ್ಲಿ ಧ್ವನಿವರ್ಧಕಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ. ಪೊಲೀಸರಲ್ಲೇ ಬೇಸ್ ಸ್ಪೀಕರ್ ಹಾಗೂ ಡಿಜೆ ಬಗ್ಗೆ ಗೊಂದಲ ಗಳಿವೆ, ಅಸ್ಪಷ್ಟತೆ ಇದೆ, ಇದರಿಂದಾಗಿ ಕಾರ್ಯಕ್ರಮ ಆಯೋಜಕರು, ಕಲಾವಿದರು ಹಾಗೂ ಸಂಘದ ಸದಸ್ಯರಿಗೆ ಸಮಸ್ಯೆಯಾಗಿದೆ ಎಂದರು.

ಅಷ್ಟಮಿ ದಿನದಂದು ಹಲವೆಡೆ ಪೊಲೀಸರು ಧ್ವನಿವರ್ಧಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೆ ಸರಕಾರ ಒಂದು ಪರಿಹಾರವನ್ನು ಕಂಡುಕೊಳ್ಳ ಬೇಕು. ನಮಗೆ ವ್ಯಾಪಾರ ಇರುವುದೇ ಮಳೆಗಾಲದ ಅನಂತರದ ಹಬ್ಬದ ಸಂದರ್ಭದಲ್ಲಿ, ಅದಕ್ಕೂ ಈ ರೀತಿ ಅಡ್ಡಿ ಉಂಟು ಮಾಡಿದರೆ ನಷ್ಟವಾಗುತ್ತದೆ ಎಂದು ಸ್ಥಾಪಕಾಧ್ಯಕ್ಷ ಅಶೋಕ್‌ ಕುಮಾರ್ ಬಿ. ತಿಳಿಸಿದರು.

ಸಂಘದ ಗೌರವಾಧ್ಯಕ್ಷ ರಾಜಶೇಖರ ಶೆಟ್ಟಿ ಕುಡ್ತಮುಗೇರ್, ಮಹೇಶ್ ಬೋಳಾರ್ ಎಲ್.ಎಂ, ಸುದರ್ಶನ್, ದೇವರಾಜ್, ನಿಶಿತ್ ಪೂಜಾರಿ, ಬಾಬು ಕೆ.ವಿಟ್ಲ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 30ರಂದು ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | ಸಾರ್ವಜನಿಕರಿಗೂ ಜಿಲ್ಲಾಧಿಕಾರಿ ನೀಡಿದ್ದಾರೆ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ…