ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 30, ಶನಿವಾರ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ರಜೆ ಘೋಷಿಸಿದೆ.
ಜಿಲ್ಲಾಧಿಕಾರಿಗಳ ಪ್ರಕಟಣೆಯ ಪ್ರಕಾರ:
ಪೋಷಕರು ಮಕ್ಕಳನ್ನು ನದಿತೀರ, ಸಮುದ್ರತೀರ ಮತ್ತು ನೀರು ತುಂಬಿರುವ ಪ್ರದೇಶಗಳಿಗೆ ಕರೆದೊಯ್ಯದಂತೆ ಎಚ್ಚರಿಕೆ ನೀಡಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ತುರ್ತು ಪರಿಸ್ಥಿತಿಗೆ ತಕ್ಷಣ ಸ್ಪಂದಿಸಬೇಕು.
ಪ್ರವಾಸಿಗರು ನದಿತೀರ ಹಾಗೂ ಸಮುದ್ರತೀರಗಳಿಗೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.
ಜಿಲ್ಲಾಧಿಕಾರಿ ಮಂಗಳೂರಿನ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಪ್ರಕಟಣೆಯನ್ನು ಹೊರಡಿಸಿದೆ.