tamanvi
ಕರಾವಳಿ

ಸುಳ್ಯ: ಸಮೀಕ್ಷೆ ವೇಳೆ ಶಿಕ್ಷಕಿಯ ಮೇಲೆರಗಿದ ನಾಯಿ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.

maithri

ಮೂಲಗಳ ಪ್ರಕಾರ, ಮೂವಪ್ಪೆ ಶಾಲೆಯ ಶಿಕ್ಷಕಿಯೊಬ್ಬರು ಸರ್ವೆಗಾಗಿ ಕೊಡಿಯಾಲದ ನಿದ್ಮಾರು ಎಂಬಲ್ಲಿನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಆ ಮನೆಯ ನಾಯಿ ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದೆ. ಪರಿಣಾಮ ಶಿಕ್ಷಕಿಯ ಬಟ್ಟೆ ಹರಿದುಹೋಗಿದೆ.

ಶಿಕ್ಷಕಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ತನ್ನ ಚೀಲವನ್ನು ಅಡ್ಡ ಹಿಡಿದಿದ್ದಾರೆ. ಈ ವೇಳೆ ಮನೆಯವರು ಹೊರಗೆ ಓಡಿಬಂದು ನಾಯಿಯನ್ನು ಹಿಡಿದುಕೊಂಡಿದ್ದಾರೆ.

ಈ ಘಟನೆಯಿಂದ ಶಿಕ್ಷಕಿ ತೀವ್ರವಾಗಿ ಬೆದರಿದ್ದು, ಸಮೀಕ್ಷೆಯನ್ನು ಮುಂದುವರಿಸಲು ಸಾಧ್ಯವಾಗದೆ ಮನೆಗೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…