ಕರಾವಳಿ

ವಿಕಸಿತ ಭಾರತ ಯುವ ಸಂಸತ್ ಸ್ಪರ್ಧೆಗೆ ನೊಂದಣಿ ಆರಂಭ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಮುಖ ಉಪಕ್ರಮವಾದ ವಿಕಸಿತ ಭಾರತ ಯುವ ಸಂಸತ್ 2026 ಆರಂಭಗೊಂಡಿದ್ದು, 18ರಿಂದ 25 ವರ್ಷ ವಯಸ್ಸಿನ ಯುವಕ-ಯುವತಿಯರಿಗೆ ನೋಂದಣಿಗೆ ಕರೆ ನೀಡಲಾಗಿದೆ.

core technologies

ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಹಿಂದಿ, ಇಂಗ್ಲಿಷ್ ಅಥವಾ ಕನ್ನಡ ಭಾಷೆಯಲ್ಲಿ ನಿಗದಿತ ಸಮಯದೊಳಗೆ ತಮ್ಮ ಭಾಷಣವನ್ನು ಮಂಡಿಸಬೇಕು.

akshaya college

ಆಸಕ್ತ ಯುವಕ-ಯುವತಿಯರು ಅಕ್ಟೋಬರ್ 12, 2025ರವರೆಗೆ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ MY Bharat Portal (mybharat.gov.in) ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ 10 ಜನ ಆಯ್ಕೆಯಾದವರು ಕರ್ನಾಟಕ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಪಡೆಯುತ್ತಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉನ್ನತ ಸಾಧನೆ ಮಾಡುವ ಮೂವರು ನವದೆಹಲಿಯ ಭಾರತೀಯ ಸಂಸತ್ತಿನಲ್ಲಿ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು: 9961332968, 9448061961.

ಈ ಸ್ಪರ್ಧೆಯು ಯುವಕರಿಗೆ ತಮ್ಮ ನಾಯಕತ್ವ ಗುಣಗಳನ್ನು ಪ್ರದರ್ಶಿಸಲು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಭಾಗವಹಿಸಲು ಒಂದು ಅತ್ಯುತ್ತಮ ವೇದಿಕೆಯಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ…