ಕರಾವಳಿ

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ ಶ್ರೀ ಮುಚ್ಚುಲೋಡ್ ಭಗವತೀ ಕ್ಷೇತ್ರಕ್ಕೊಳಪಟ್ಟ ಗಾಣಿಗ ಸಮಾಜದ ಯುವ ಸಮುದಾಯವನ್ನು ಒಟ್ಟುಗೂಡಿಸುವ ಉದ್ದೇಶದಿಂದ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಗಾಣಿಗ ಪ್ರೀಮಿಯರ್ ಲೀಗ್ (ಜಿಪಿಎಲ್-2025) ಅ.26ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ವ್ಯವಹಾರ ಪ್ರದರ್ಶನ ಮತ್ತು ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಯು ನಡೆಯಲಿದೆ ಎಂದು ದ.ಕ.ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ ರಾಮ ಮುಗೋಡಿ ಹೇಳಿದರು.

 

akshaya college

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಟು ತಂಡಗಳ ನಿಗದಿತ ಓವರ್‌ಗಳ ಓವರ್ ಆರ್ಮ್ ಲೀಗ್ ಪಂದ್ಯಾಟ ನಡೆಯಲಿದ್ದು, ಬೆಳಗ್ಗೆ ಗಂಟೆ 6ಕ್ಕೆ ಪಂದ್ಯಾಟಕ್ಕೆ ಚಾಲನೆ ನೀಡಲಾಗುವುದು. ಈ ನಡುವೆ ಗಾಣಿಗ ಸಮುದಾಯದ ಉದ್ಯಮಿಗಳಿಗೆ ತಮ್ಮ ವ್ಯವಹಾರವನ್ನು ಪ್ರಚಾರ ಮಾಡುವ ದೃಷ್ಟಿಯಿಂದ ವ್ಯವಹಾರ ಪ್ರದರ್ಶನ ಕೌಂಟರ್ ಅನ್ನು ಒದಗಿಸಿಕೊಡಲಾಗುವುದು. ಸಮುದಾಯದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದ ಅವರು ಬೆಳಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉದ್ಘಾಟಿಸಲಿದ್ದಾರೆ. ಉದ್ಯಮಿ ಶಿವಶಂಕ‌ರ್ ನೆಕ್ರಾಜೆ ಅವರು ಟ್ರೋಫಿ ಅನಾವರಣ ಮತ್ತು ವಿಜ್ಞಾನ ಮಾದರಿಯ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಅವರು ಜಿಲ್ಲಾ ಸಂಘದ ವೆಬ್‌ಸೈಟ್‌ ಅನ್ನು ಅನಾವರಣ ಮಾಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ವ್ಯವಹಾರ ಪ್ರದರ್ಶನ ಉದ್ಘಾಟಿಸಲಿದ್ದಾರೆ.

 

ಮುಖ್ಯ ಅತಿಥಿಗಳಾಗಿ ಮಂಗಳೂರು ಶಾಸಕರಾದ ವೇದವ್ಯಾಸ ಕಾಮತ್, ವೈ ಭರತ್ ಶೆಟ್ಟಿ, ಮೂಡಬಿದರೆ ಶಾಸಕ ಉಮನಾಥ್ ಕೋಟ್ಯಾನ್,ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ,ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ, ಬೆಂಗಳೂರು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್,ಪಿಡಬ್ಲ್ಯೂಡಿ ಗುತ್ತಿಗೆದಾಗ ಬಾಲಚಂದ್ರ ಅಡ್ಕಾರ್ ಸಹಿತ ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

 

ಸಂಜೆ ಸಮಾರೋಪ ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಗಾಣಿಗ ನಿಗಮ ಮಂಡಳಿ ಅಧ್ಯಕ್ಷ ವಿಶ್ವಾಸ್‌ ಕುಮಾರ್ ದಾಸ್, ಹಿಂದು ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

 

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಘದ ಗೌರವಾಧ್ಯಕ್ಷ ಶಂಕರ ಪಾಟಾಳಿ, ಪ್ರಧಾನ ಕಾರ್ಯದರ್ಶಿ ಮಹಾಲಿಂಗ ಸುಳ್ಯ, ಕೋಶಾಧಿಕಾರಿ ಸುಬ್ಬಪ್ಪ ಪಟ್ಟೆ, ಪುತ್ತೂರು ವಲಯದ ಅಧ್ಯಕ್ಷ ಪ್ರಸಾದ್, ಮಂಗಳೂರು ಶಾಖೆಯ ಅಧ್ಯಕ್ಷ ಕೃಷ್ಣ ಡಿ.ಎಸ್, ರಬ್ಬರ್ ಬೋರ್ಡ್‌ ನಿವೃತ್ತ ಉಪಆಯುಕ್ತರಾಗಿರುವ ಸಂಘದ ನಿರ್ದೇಶಕ ಬಾಲಕೃಷ್ಣ ಕೆ.ಎಸ್‌ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…