tamanvi
ಕರಾವಳಿ

ತನ್ನ ಸಮುದಾಯಕ್ಕೆ ಕರೆ ನೀಡಿದ ದಲಿತ್ ಸೇವಾ ಸಮಿತಿ ನೂತನ ಜಿಲ್ಲಾಧ್ಯಕ್ಷ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಘಟನೆಯಿಂದ ಹೊರಗಿರುವ ತನ್ನ ಸಮುದಾಯವು ಕೈಜೋಡಿಸಿ ಬಲಿಷ್ಠ ಸಂಘಟನೆಯನ್ನು ಕಟ್ಟಲು ಅವಕಾಶ ನೀಡುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಕೆ. ಗೋಪಾಲ್ ನೇರಳಕಟ್ಟೆ ಕರೆ ನೀಡಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷರನ್ನಾಗಿ ತನ್ನನ್ನು ಸಂಘದ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಜಿಲ್ಲೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಿದ್ದಾರೆ. ಸಮುದಾಯದ ಸೇವೆಗೆ ಅವಕಾಶ ಸಿಕ್ಕಿದೆ. ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ, ಪಂಗಡದ ಜನರಿಗಾಗಿ ಸಂಘಟನೆ ಹೋರಾಟ ನಡೆಸುತ್ತಿದ್ದು, ಸಮುದಾಯದ ಎಲ್ಲರೂ ಸಂಘಟನೆಗೆ ಕೈಜೋಡಿಸಬೇಕು ಎಂದು ವಿನಂತಿಸಿಕೊಂಡರು.

ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಇದೀಗ 19ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಸಂಘಟನೆಯು ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಪಂಗಡದ ಜನರಿಗಾಗಿ ಹೋರಾಟ ಮತ್ತು ಸಮಾಜ ಸೇವೆಯೇ ನಮ್ಮ ಗುರಿಯಾಗಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರ ಇತಿಹಾಸವನ್ನು ನಮ್ಮ ಸಮುದಾಯಕ್ಕೆ ತಿಳಿಸಿರುವ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತೇವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ವಿಟ್ಲದ ಕಾಯಾದ್ಯಕ್ಷ ಚಂದ್ರಶೇಖರ್ ಯು, ಜಿಲ್ಲಾ ಉಪಾಧ್ಯಕ್ಷ ಲೋಕೇಶ್ ತೆಂಕಿಲ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಲಿತಾ ಕಾರ್ಪಾಡಿ, ಸದಸ್ಯ ಲಕ್ಷ್ಮಣ ಪಾರೆ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…