ಕಾಸರಗೋಡಿನ ಅನಂತಪುರದ ಪ್ಲೈವುಡ್ ಕಾರ್ಖಾನೆಯಲ್ಲಿ ಸುಮಾರು 300 ಕಾರ್ಮಿಕರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಒಬ್ಬರು ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಅ.27 (ಸೋಮವಾರ) ಸುಮಾರು ಗಂಟೆ 7ರಿಂದ30ರೊಳಗೆ ನಡೆದ ದುರ್ಘಟನೆ ನಡೆದಿದೆ. ಇದರಲ್ಲಿ ಒಬ್ಬ ವಲಸೆ ಕಾರ್ಮಿಕ ಓರ್ವ ಮೃತಪಟ್ಟಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಅನಂತಪುರ ಬಳಿಯ ಕಣ್ಣೂರು ಕುನ್ನಿಲ್ ಸಮೀಪದ ಡೆಕ್ಕೂರು ಪ್ಲೈವುಡ್ ಫ್ಯಾಕ್ಟರಿಯಲ್ಲಿನ ಬಾಯ್ಲರ್ ಸ್ಪೋಟಗೊಂಡಿದ್ದು ವಿವಿದೆಡೆ ಬೆಂಕಿ ಹರಡಿತು. 300ರಷ್ಟು ಕಾರ್ಮಿಕರು ಸ್ಪೋಟ ಸಮಯದಲ್ಲಿ ಸ್ಥಳದಲ್ಲಿದ್ದರು ಎಂದು ವರದಿಯಾಗಿದೆ.
ಸ್ಫೋಟದ ಪರಿಣಾಮ ಪೆರಾಲ್ ಕಣ್ಣೂರು, ಸಿದ್ದಿಬಯಲು ಸಮೀಪದವರೆಗೆ ಇದರ ಅಪಾಯ ಸಂಭವಿಸಿದೆ. ಈ ಬಗ್ಗೆ ಅಗ್ನಿಶಾಮಕ ದಳ ಸಮೇತ ಹಲವರು ಪರಿಸ್ಥಿತಿ ನಿಯಂತ್ರಣದಲ್ಲಿ ತೊಡಗಿದ್ದಾರೆ. ಈ ಭಾಗಕ್ಕೆ ವಾಹನ ಸಂಚಾರ ನಿಷೇಧಿಸಲಾಗಿದೆ. ದುರ್ಘಟನೆಯಲ್ಲಿ ಹೆಚ್ಚಿನ ಪ್ರಾಣಾಪಾಯ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಂತೆ ಸಾವುನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

























