ಕರಾವಳಿ

ನ. 28ಕ್ಕೆ ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ತಮ್ಮ ನಾಲ್ಕನೇ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ಮುಂದಿನ ನ.28ರಂದು ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದು, ಅದರಂತೆ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

core technologies

ನ.28ರಂದು ನಡೆಯುವ ಲಕ್ಷ ಕಂಠ ಗೀತಗಾಯನ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಭಾಗವಹಿಸಲಿ ದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮೂಲಗಳು ತಿಳಿಸಿವೆ. ಪ್ರಧಾನಿ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆಯುವರಲ್ಲದೇ, ಗೀತಾ ಮಂದಿರಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ ಎಂದು ತಿಳಿದುಬಂದಿದೆ.

akshaya college

2008-10ರ ಪುತ್ತಿಗೆ ಶ್ರೀಗಳ ತೃತೀಯ ಪರ್ಯಾಯದ ಸಂದರ್ಭದಲ್ಲಿ ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು 2008ರ ಮೇ8ರಂದು ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದು ಪುತ್ತಿಗೆ ಶ್ರೀಗಳಿಂದ ಸನ್ಮಾನ ಸ್ವೀಕರಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ…

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…