tamanvi
ಕರಾವಳಿ

ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ವಿರುದ್ಧ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ | ನಾಯಿಗಳು ಗುಂಪು ಸೇರಲು ಎಲ್ಲೆಂದರಲ್ಲಿ ಆಹಾರ ಹಾಕುವುದೇ ಕಾರಣ: ಸುಪ್ರೀಂ ಆದೇಶ ಪಾಲಿಸಲು ಒತ್ತಾಯ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರು‌ ಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರು ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ಅಧಿಕವಾಗಿದೆ. ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ವ್ಯಕ್ತಿಯೋರ್ವರು ನಾಯಿ ಕಚ್ಚಿ ಸಾವನ್ನಪ್ಪಿದ್ದಾರೆ. ಇದು ಎಲ್ಲೂ ಮರುಕಳಿಸಬಾರದು. ಶಾಲೆ ಬಿಟ್ಟು ತೆರಳುವ ಸಂದರ್ಭದಲ್ಲಿ ನಾಯಿಗಳ ಗುಂಪು ಓಡಿಸಿದ್ದಲ್ಲಿ ಅಪಘಾತಗಳು ಉಂಟಾಗುವ ಸಾಧ್ಯತೆ ಇದೆ. ಪುತ್ತೂರಿನಲ್ಲಿ ಎಲ್ಲೆಂದರಲ್ಲಿ ನಾಯಿಗೆ ಆಹಾರ ಹಾಕುತ್ತಿರುವ ಕೆಲವು ವ್ಯಕ್ತಿಗಳಿಂದಾಗಿ ನಾಯಿಗಳು ಒಂದೆಡೆ ಗುಂಪು ಸೇರುತ್ತಿದೆ. ಸುಪ್ರಿಂ ಆದೇಶ ಪ್ರಕಾರ ನಾಯಿಗಳನ್ನು ಶೆಲ್ ನಲ್ಲಿ ಹಾಕಿ ಅಲ್ಲಿ ಆಹಾರ ಹಾಕುವ ವ್ಯವಸ್ಥೆಯನ್ನು ಕೂಡಲೇ ಜಾರಿ ಮಾಡಬೇಕು.

ಹುಚ್ಚು ನಾಯಿ ಕಡಿತಕ್ಕೊಳಗಾದಲ್ಲಿ ಅದರಿಂದ ಆಗುವ ಸಾವು ನೋವುಗಳನ್ನು ಸಹಿಸಲು ಯಾರಿಂದಲೂ ಸಾಧ್ಯವಿಲ್ಲ. ಜಿಲ್ಲಾಡಳಿತ ತಕ್ಷಣ ಎಚ್ಚೆತ್ತು ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕಬೇಕು ಎಂದು ಸಭೆಗೆ ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು, ಪುತ್ತೂರು, ಸುಳ್ಯದಲ್ಲಿ ಕೋರ್‌ ಮೆಗಾ ಸೇಲ್‌.. ರಿಫರ್ಬಿಶ್ಡ್ ಲ್ಯಾಪ್’ಟಾಪ್ ಖರೀದಿಗೆ ಸಿಗಲಿದೆ ಭರ್ಜರಿ ಆಫರ್ಸ್!!

ಮಂಗಳೂರು: ಪುತ್ತೂರು, ಸುಳ್ಯ ಹಾಗೂ ಮಂಗಳೂರಿನಲ್ಲಿ ಶಾಖೆಗಳನ್ನು ಹೊಂದಿರುವ ಕೋರ್ ಟೆಕ್ನಾಲಜೀಸ್…