ಕರಾವಳಿ

ಧರ್ಮಸ್ಥಳ ಲಕ್ಷದೀಪೋತ್ಸವ: ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭ | ಜ್ಞಾನ, ವಿಜ್ಞಾನ, ಸುಜ್ಞಾನದ ಅಪೂರ್ವ ಮಾಹಿತಿಯ ಕಣಜ ವಸ್ತುಪ್ರದರ್ಶನ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು.

core technologies

darmasthala

akshaya college

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡಯವರ ಉಪಸ್ಥಿತಿಯಲ್ಲಿ ಶಾಸಕ ಹರೀಶ್ ಪೂಂಜ ವಸ್ತುಪ್ರದರ್ಶನ ಉದ್ಘಾಟಿಸಿ ಶುಭ ಹಾರೈಸಿದರು.
ಪುಸ್ತಕ ಮಳಿಗೆಗಳು, ಆರೋಗ್ಯ, ಶಿಕ್ಷಣ, ಕೃಷಿ, ವಾಣಿಜ್ಯ, ಜೀವ ವಿಮೆ, ಸರ್ಕಾರದ ವಿವಿಧ ಇಲಾಖಾ ಮಳಿಗೆಗಳು, ಅಂಚೆ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಗ್ರಾಮೀಣ ಕರಕುಶಲ ಕೈಗಾರಿಕೆಗಳು, ವಸ್ತ್ರ ಮಳಿಗೆಗಳು, ಆಯುರ್ವೇದ ಔಷಧಿ ಮಳಿಗೆಗಳು, ಪೂಜಾ ಸಾಮಾಗ್ರಿಗಳು, ಸಿರಿಧಾನ್ಯಗಳು, ಅಡಿಕೆ ಹಾಳೆತಟ್ಟೆ ತಯಾರಿ, ಸೇರಿದಂತೆ 350ಕ್ಕೂ ಮಿಕ್ಕಿ ಮಳಿಗೆಗಳಿದ್ದು ಪ್ರೇಕ್ಷಕರ ಕಣ್ಮನ ಸೆಳೆಯುತ್ತಿವೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಎಲ್ಲಾ ಮಳಿಗೆಗಳಿಗೂ ಭೇಟಿ ನೀಡಿ ಶುಭ ಹಾರೈಸಿದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಜನಾರ್ದನ ಕೆ.ಎನ್., ಎಸ್.ಡಿ.ಎಂ. ಕಾಲೇಜಿನ ಡಾ. ಶ್ರೀಧರ ಭಟ್, ಪಿ. ಜಿನರಾಜ ಆರಿಗ ವಗ್ಗ ಮೊದಲಾದವರು ಉಪಸ್ಥಿತರಿದ್ದರು.

ನ. 20ರ ವರೆಗೆ ಪ್ರತಿ ದಿನ ಬೆಳಿಗ್ಗೆ ಒಂಭತ್ತು ಗಂಟೆಯಿಂದ ರಾತ್ರಿ ಹತ್ತು ಗಂಟೆವರೆಗೆ ವಸ್ತುಪ್ರದರ್ಶನಕ್ಕೆ ಉಚಿತ ಪ್ರವೇಶಾವಕಾಶವಿದೆ.

ವಸ್ತುಪ್ರದರ್ಶನ ವೇದಿಕೆಯಲ್ಲಿ ಪ್ರತಿದಿನ ಸಂಜೆ ಆರು ಗಂಟೆಯಿಂದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಮಯಕ್ಕೆ ಸರಿಯಾಗಿ ಬನ್ನಿರೆಂದ ಡಾ. ಮೋಹನ್ ಆಳ್ವ! ‘ನೀವು ಒಮ್ಮೆ ಚುನಾವಣೆಗೆ ನಿಲ್ಲಿ’ರೆಂದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ 5.45ಕ್ಕೆ ಸರಿಯಾಗಿ ಆಳ್ವಾಸ್ ಸಾಂಸ್ಕೃತಿಕ ವೈಭವ ಶುರುವಾಗಲಿದೆ. ಈ…

ನ. 16ರಂದು ಪುತ್ತೂರಿನಲ್ಲಿ ಅನಾವರಣಗೊಳ್ಳಲಿದೆ 350 ವಿದ್ಯಾರ್ಥಿಗಳ ಕಲಾಪ್ರದರ್ಶನ ‘ಆಳ್ವಾಸ್ ಸಾಂಸ್ಕೃತಿಕ ವೈಭವ’’

ಪುತ್ತೂರು: ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಆಳ್ವಾಸ್ ನುಡಿಸಿರಿ…

ನ. 19: ಪುತ್ತೂರಿನಲ್ಲಿ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ…

ವೈದ್ಯಕೀಯ ವಿದ್ಯಾರ್ಥಿಗಳಿಂದ ಡ್ರಗ್ಸ್ ಪೆಡ್ಲಿಂಗ್‌| ಮೊಹಮ್ಮದ್ ನಿಗಾರೀಸ್, ಶಕೀಬ್, ಸಬೀರ್ ಉಳ್ಳಾಲ ಪೊಲೀಸರ ವಶ!

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು…