ಪುತ್ತೂರು: ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು (ಪರಿಶಿಷ್ಟ ಪಂಗಡ) ಅಸ್ತಿತ್ವಕ್ಕೆ ಬಂದಿದ್ದು, ಪುತ್ತೂರಿನ ಮರಾಟಿ ಸಮಾಜ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿತು.

ಒಕ್ಕೂಟದ ಉದ್ಘಾಟನೆ ಹಾಗೂ ಐಎಎಸ್ ಅಧಿಕಾರಿ ಹೆಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ಭಾನುವಾರ ನಡೆಯಿತು.
ಶಾಸಕ ಅಶೋಕ್ ಕುಮಾರ್ ರೈ ಅವರು ಒಕ್ಕೂಟವನ್ನು ಉದ್ಘಾಟಿಸಿದರು.
ಇದೇ ಸಂದರ್ಭ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ಹೆಚ್. ರಾಜೇಶ್ ಪ್ರಸಾದ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಮೂಡುಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ರಾಜ್ಯ ಮರಾಟಿ ಒಕ್ಕೂಟದ ಅಧ್ಯಕ್ಷ, ನಿವೃತ್ತ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ. ಸುಂದರ ನಾಯಕ್, ಬೆಂಗಳೂರು ಇಂಡಿಯನ್ ಅಡಿಟ್ ಅಂಡ್ ಅಕೌಂಟ್ಸ್ ಪ್ರಿನ್ಸಿಪಾಲ್ ಅಕೌಂಟೆಂಟ್ ಜನರಲ್ ಕಚೇರಿಯ ಸೀನಿಯರ್ ಡೆಪ್ಯೂಟಿ ಅಕೌಂಟೆಂಟ್ ಜನರಲ್ ಯಶೋದ ಮೊದಲಾದವರು ಉಪಸ್ಥಿತರಿದ್ದರು.

























