tamanvi
ಕರಾವಳಿ

ಸಮಯಕ್ಕೆ ಸರಿಯಾಗಿ ಬನ್ನಿರೆಂದ ಡಾ. ಮೋಹನ್ ಆಳ್ವ! ‘ನೀವು ಒಮ್ಮೆ ಚುನಾವಣೆಗೆ ನಿಲ್ಲಿ’ರೆಂದ ಶಾಸಕ ಅಶೋಕ್ ರೈ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಭಾನುವಾರ ಸಂಜೆ 5.45ಕ್ಕೆ ಸರಿಯಾಗಿ ಆಳ್ವಾಸ್ ಸಾಂಸ್ಕೃತಿಕ ವೈಭವ ಶುರುವಾಗಲಿದೆ. ಈ ಸಂದರ್ಭ ಸಮಯಕ್ಕೆ ಸರಿಯಾಗಿ ಬರಬೇಕು ಎಂದು ಡಾ. ಮೋಹನ್ ಆಳ್ವ ಅವರು ಶಾಸಕ ಅಶೋಕ್ ಕುಮಾರ್ ರೈ ಅವರಲ್ಲಿ ಕೇಳಿಕೊಂಡರು.

ಪುತ್ತೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಡಾ. ಮೋಹನ್ ಆಳ್ವ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ವೇದಿಕೆ ಹಂಚಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಅಶೋಕ್ ರೈ ಆಗಮನ ತಡವಾಗಿತ್ತು. ಈ ಹಿನ್ನೆಲೆಯಲ್ಲಿ ವೇದಿಕೆಯಲ್ಲಿ ಮಾತನಾಡುತ್ತಾ ಮೋಹನ್ ಆಳ್ವ, ವಿನಂತಿಸಿಕೊಂಡರು.

ಡಾ. ಮೋಹನ್ ಆಳ್ವ ಅವರು ಸಮಯ ಪಾಲನೆಗೆ ಹೆಚ್ಚಿನ ಒತ್ತು ನೀಡುವವರು. ಆಳ್ವಾಸ್ ಕಾರ್ಯಕ್ರಮಗಳು ಸಮಯಕ್ಕೆ ಸರಿಯಾಗಿ ಶುರುವಾಗುತ್ತವೆ. ಈ ಹಿನ್ನೆಲೆಯಲ್ಲಿ ಪುತ್ತೂರಿನ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ  ಸಮಯಕ್ಕೆ ಸರಿಯಾಗಿ ಆಗಮಿಸುವಂತೆ ವಿನಂತಿಸಿದರು.

ತಮ್ಮ ಮಾತಿನ ಸಂದರ್ಭ ಇದಕ್ಕೆ ಉತ್ತರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು, ನೀವು ಒಮ್ಮೆ ಚುನಾವಣೆಗೆ ನಿಲ್ಲಿರೆಂದು ತಮಾಷೆಗೈದರು.

ದಿನನಿತ್ಯ ನೂರಾರು ಜನರು ಎಲ್ಲೆಂಲ್ಲಿಂದಲೋ ಬರುತ್ತಿರುತ್ತಾರೆ. ಅವರ ಅಹವಾಲು ಸ್ವೀಕರಿಸದೇ ಹೋದರೆ, ಎಲ್ಲಿ ನ್ಯಾಯ ಕೊಡಲು ಅಸಮರ್ಥನಾಗುತ್ತೇನೋ ಎಂಬ ಭಯ ಕಾಡುತ್ತದೆ. ಹಾಗಾಗಿ ಬೇಗ ಬರಬೇಕು ಅಂದುಕೊಂಡರೂ ಸಮಯಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಆದರೆ ಸಂಜೆ ನಡೆಯುವ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಆಗಮಿಸುತ್ತೇನೆ ಎಂದು ಭರವಸೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…