ಕರಾವಳಿ

ನ. 19: ಪುತ್ತೂರಿನಲ್ಲಿ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ `ಅಟಲ್ ವಿರಾಸತ್ ‘ ಬೃಹತ್ ಸಮಾವೇಶ ನ. 19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಅಟಲ್ ವಿರಾಸತ್‌ನ ಸಂಚಾಲಕ ವಿಧಾನ ಪರಿಷತ್ ಸದಸ್ಯ ಕಿಶೋ‌ರ್ ಕುಮಾ‌ರ್ ಪುತ್ತೂರು ಹೇಳಿದರು.

core technologies

ನ.19ರಂದು ಬೆಳಗ್ಗೆ 10ಕ್ಕೆ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಬಳಿಯ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಸಂಸದ ಕ್ಯಾ। ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ ಅವರು, ಕಾರ್ಯಕ್ರಮದ ಯಶಸ್ಸಿಗೆ ಪ್ರತಿ ಬೂತ್ ಮಟ್ಟದಿಂದ ಕಾರ್ಯಕರ್ತರು, ಹಿರಿಯರು ಬರಲಿದ್ದಾರೆ. ಉತ್ಸವ ರೀತಿಯಲ್ಲಿ ಕಾರ್ಯಕ್ರಮ ಮೂಡಿ ಬರಲಿದೆ ಎಂದರು.

akshaya college

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರು ಈ ರಾಷ್ಟ್ರಕ್ಕೆ ಮತ್ತು ಸಂಘಟನೆ ಕೊಟ್ಟಿರುವ ಅನೇಕ ಸಂಘಟನಾತ್ಮಕ ಸಂಗತಿಗಳನ್ನು ನೆನಪು ಮಾಡುವ ರೀತಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ಒಟ್ಟು ಪುತ್ತೂರು ಬಿಜೆಪಿಗೆ ಶಕ್ತಿಯ ಕೇಂದ್ರ. ಈ ಕೇಂದ್ರದಲ್ಲಿ ಅಟಲ್ ವಿರಾಸತ್ ಮಾಡುವ ಸಂಕಲ್ಪವಿತ್ತು. ಈ ಕಾರ್ಯಕ್ರಮಕ್ಕೆ ಮುಂದೆ ಬಿಜೆಪಿ ಜನಸಂಘದ ಕಾಲದಿಂದ ಪಾರ್ಟಿಗಾಗಿ ದುಡಿದ ಅನೇಕ ಹಿರಿಯರನ್ನು ಗೌರವಿಸುವ ಕೆಲಸ ಜಿಲ್ಲಾ ಸಮಿತಿಯಿಂದ ಆಗಿತ್ತು. ನಾಳಿದ್ದು ಕೂಡಾ ಅಂತಹ ಕೆಲವರನ್ನು ಗುರುತಿಸಿ ಅಭಿನಂದಿಸುವ ಕಾರ್ಯ ನಡೆಯಲಿದೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾ‌ರ್ ಮಾರ್ತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಸುನಿಲ್ ಆಳ್ವ, ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಪಿ.ಬಿ., ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಚಂದ್ರಶೇಖರ್ ರಾವ್ ಬಪ್ಪಳಿಗೆ ಮತ್ತಿತರರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಮಯಕ್ಕೆ ಸರಿಯಾಗಿ ಬನ್ನಿರೆಂದ ಡಾ. ಮೋಹನ್ ಆಳ್ವ! ‘ನೀವು ಒಮ್ಮೆ ಚುನಾವಣೆಗೆ ನಿಲ್ಲಿ’ರೆಂದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ 5.45ಕ್ಕೆ ಸರಿಯಾಗಿ ಆಳ್ವಾಸ್ ಸಾಂಸ್ಕೃತಿಕ ವೈಭವ ಶುರುವಾಗಲಿದೆ. ಈ…

ನ. 16ರಂದು ಪುತ್ತೂರಿನಲ್ಲಿ ಅನಾವರಣಗೊಳ್ಳಲಿದೆ 350 ವಿದ್ಯಾರ್ಥಿಗಳ ಕಲಾಪ್ರದರ್ಶನ ‘ಆಳ್ವಾಸ್ ಸಾಂಸ್ಕೃತಿಕ ವೈಭವ’’

ಪುತ್ತೂರು: ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಆಳ್ವಾಸ್ ನುಡಿಸಿರಿ…

ವೈದ್ಯಕೀಯ ವಿದ್ಯಾರ್ಥಿಗಳಿಂದ ಡ್ರಗ್ಸ್ ಪೆಡ್ಲಿಂಗ್‌| ಮೊಹಮ್ಮದ್ ನಿಗಾರೀಸ್, ಶಕೀಬ್, ಸಬೀರ್ ಉಳ್ಳಾಲ ಪೊಲೀಸರ ವಶ!

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು…