ಪುತ್ತೂರು: ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ನೀಡುವ ಕಲಾರತ್ನ ರಾಜ್ಯೋತ್ಸವ ಪ್ರಶಸ್ತಿ ಪುತ್ತೂರು ನೆಹರುನಗರದ ರೋಹಿಣಿ ಹೊಲಿಗೆ & ಆರ್ಟ್ಸ್ & ಕ್ರಾಫ್ಟ್ ತರಬೇತಿ ಕೇಂದ್ರದ ವ್ಯವಸ್ಥಾಪಕಿ ರೋಹಿಣಿ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ.
ನವೆಂಬರ್ 30ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಾ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.



























