tamanvi
ಕರಾವಳಿ

ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ಆಚರಿಸಲಾಯಿತು.

maithri

prajna-ashrama

ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಆಶ್ರಮದ ವಿಶೇಷ ಚೇತನ ವಿದ್ಯಾರ್ಥಿಗಳೊಂದಿಗೆ ದೀಪ ಬೆಳಗಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಶುಭಹಾರೈಸಲಾಯಿತು. ಇದೇ ಸಂದರ್ಭ ಆಶ್ರಮದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ಹಾಗೂ ಉಪಾಹಾರ ನೀಡಲಾಯಿತು.

ಜಿಲ್ಲಾ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಾಮಾಜಿಕ ಕಾರ್ಯದ ಬಗ್ಗೆ ಸದಾ ಆಲೋಚಿಸುವವರು. ಹಾಗಾಗಿ ಅವರ ಹುಟ್ಟುಹಬ್ಬವನ್ನು ಬೀರಮಲೆ ಪ್ರಜ್ಞಾ ಮಾನಸಿಕ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದೇವೆ. ಹೆಗ್ಗಡೆ ಅವರಿಗೆ ನೆಮ್ಮದಿಯ ಜೀವನವನ್ನು, ಆಯುಷ್ಯ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಹಾರೈಸಿದರು.

ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹಾಬಲ ರೈ, ತಾಲೂಕು ಯೋಜನಾಧಿಕಾರಿ ಶಶಿಧರ್, ತಾಲೂಕು ಲೆಕ್ಕಪರಿಶೋಧಕಿ ಲತಾ, ಬಲ್ನಾಡು ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಪ್ರಜ್ಞಾ ವಿಕಲಚೇತನರ ಪುನರ್ವಸತಿ ಕೇಂದ್ರದ ಅಣ್ಣಪ್ಪ ದಂಪತಿ, ಬಲ್ನಾಡು ಶೌರ್ಯ ಘಟಕದ ಪ್ರತಿನಿಧಿ ವಿನಯ ನಾಯ್ಕ, ಸಂಯೋಜಕಿ ಆಶಾಲತಾ, ಸದಸ್ಯರಾದ ಲೋಕೇಶ್, ಜಗದೀಶ್, ಹರಿಪ್ರಸಾದ್, ದಿನೇಶ್, ವಿನೋದ್, ಸುಗಂಧಿ, ಸುಮಿತ್ರಾ, ಸೇವಾಪ್ರತಿನಿಧಿ ಇಗ್ನೇಶಿಯಸ್ ಡಿ ಸೋಜ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…