ಕರಾವಳಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ: ನೆಲ್ಲಿಕಟ್ಟೆ ರಾಮಕೃಷ್ಣ ಆಶ್ರಮದ ವಿದ್ಯಾರ್ಥಿಗಳಿಗೆ ಹಣ್ಣುಹಂಪಲು, ಉಪಾಹಾರ ವಿತರಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಹಾಗೂ ಜಿಲ್ಲಾ ಕಚೇರಿಯ ವತಿಯಿಂದ ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

chennai-shopping
maithri

ramakrishna

ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿ, ಸಂಜೆಯ ಉಪಾಹಾರ ವಿತರಿಸಲಾಯಿತು.

ಈ ಸಂದರ್ಭ ಮಾತನಾಡಿದ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಕ್ಕಳಿಗೆ ವಿಶೇಷ ಆದ್ಯತೆ ನೀಡಿದವರು. ಹಾಗಾಗಿ ಅವರ ಹುಟ್ಟುಹಬ್ಬ ಸಂದರ್ಭ ನೆಲ್ಲಿಕಟ್ಟೆ ರಾಮಕೃಷ್ಣ ಸೇವಾಶ್ರಮದಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅರ್ಥಪೂರ್ಣ ಎಂದ ಅವರು, ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಹಾರೈಕೆ ಸಲ್ಲಿಸಿದರು.

ನೆಲ್ಲಿಕಟ್ಟೆ ರಾಮಕೃಷ್ಣ ಸೇವಾಶ್ರಮದ ಜೊತೆ ಕಾರ್ಯದರ್ಶಿ ವತ್ಸಲಾ ರಾಜ್ಞಿ ಮಾತನಾಡಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಶುಭಹಾರೈಸಿದರು.

ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಲೊಕೇಶ್ ಹೆಗ್ಡೆ, ಜಿಲ್ಲಾ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಪುತ್ತೂರು ವಲಯಾಧ್ಯಕ್ಷೆ ಸ್ವರ್ಣಲತಾ ಹೆಗ್ಡೆ, ಯೋಜನಾಧಿಕಾರಿ ಶಶಿಧರ್, ಜಿಲ್ಲಾ ನೋಡೆಲ್ ಅಧಿಕಾರಿ ಶ್ರೀರಾಮ್, ಎಂ.ಐ.ಎಸ್. ಅಧಿಕಾರಿ ಶಕುಂತಳಾ, ಪುತ್ತೂರು ವಲಯ ಮೇಲ್ವಿಚಾರಕಿ ಉಷಾಲತಾ, ಮ್ಯಾನೇಜರ್ ಅರ್ಚನಾ, ತಾಲೂಕು ಲೆಕ್ಕಪರಿಶೋಧಕಿ ಲತಾ ಕುಮಾರಿ, ನೆಲ್ಲಿಕಟ್ಟೆ ರಾಮಕೃಷ್ಣ ಸೇವಾಶ್ರಮದ ನಿರ್ದೇಶಕ ಹರೇಕೃಷ್ಣ, ಸೇವಾಪ್ರತಿನಿಧಿಗಳು, ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿಗಳು, ಎಸ್.ಕೆ.ಡಿ.ಆರ್.ಡಿ.ಪಿ. ಯೋಜನಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts