tamanvi
ಕರಾವಳಿ

ಕ್ಯಾಂಪ್ಕೊ ಅಧ್ಯಕ್ಷರಾಗಿ ಸತೀಶ್ಚಂದ್ರ ಎಸ್.ಆರ್., ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಅಂಡ್ ಪ್ರೋಸೆಸ್ಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ), ಮಂಗಳೂರು – ಇದರ 2025-2030ರ ಅವಧಿಗೆ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಸ್. ಆರ್. ಸತೀಶ್ಚಂದ್ರ ನೂತನ ಅಧ್ಯಕ್ಷರಾಗಿ ಹಾಗೂ ಪದ್ಮರಾಜ್ ಪಟ್ಟಾಜೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

maithri

ಚುನಾವಣಾ ಫಲಿತಾಂಶ ನವದೆಹಲಿಯ ಸಹಕಾರ ಸಚಿವಾಲಯದ ಅಡಿಯಲ್ಲಿ ಬರುವ ‘ಸಹಕಾರಿ ಚುನಾವಣಾ ಪ್ರಾಧಿಕಾರ’ದ ಅಧಿಕೃತ ಅನುಮೋದನೆ ಇನ್ನಷ್ಟೆ ಬರಬೇಕಿದೆ.

ಎಸ್.ಆರ್. ಸತೀಶ್ಚಂದ್ರ ಪರಿಚಯ:

ಈ ಹಿಂದೆಯೂ ಅಧ್ಯಕ್ಷರಾಗಿದ್ದ ಎಸ್.ಆರ್. ಸತೀಶ್ಚಂದ್ರ ಅವರು ಇದೀಗ ಮತ್ತೊಂದು ಅವಧಿಗೆ ಕ್ಯಾಂಪ್ಕೋ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದವರಾದ ಎಸ್. ಆರ್. ಸತೀಶ್ಚಂದ್ರ ಅವರು ಸಹಕಾರಿ ಕ್ಷೇತ್ರದಲ್ಲಿ ಹಿರಿಯ ಚೇತನವಾಗಿದ್ದು, ಕಳೆದ ಎರಡೂವರೆ ದಶಕಗಳಿಗೂ ಹೆಚ್ಚು ಕಾಲದ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಇವರು 2015-2020ರ ಅವಧಿಯಲ್ಲಿ ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದು, ನಿರ್ಗಮಿತ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಉಪಾಧ್ಯಕ್ಷ ಪದ್ಮರಾಜ್ ಪಟ್ಟಾಜೆ:

ಕಾಸರಗೋಡಿನ ಪಟ್ಟಾಜೆ-ಬದಿಯಡ್ಕ ಮೂಲದ ಪ್ರಗತಿಪರ ಕೃಷಿಕರಾದ ಪದ್ಮರಾಜ್ ಪಟ್ಟಾಜೆ ಅವರು ದರ‍್ಘಕಾಲದಿಂದ ಸಹಕಾರಿ ಆಂದೊಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರು ಸತತ ಎರಡು ಅವಧಿಗೆ ಕ್ಯಾಂಪ್ಕೊ ಸಂಸ್ಥೆಯ ನರ‍್ದೇಶಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಸಾಲಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಇತರ ವಿವಿಧ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲಿಯೂ ಮಹತ್ತರ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…