ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಶೆಟ್ಟಿಯವರ ನೇತೃತ್ವದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ 9ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ವೈಭವದಿಂದ ಚಾಲನೆ ನೀಡಲಾಯಿತು.
ಶನಿವಾರ ಆಯೋಜಿಸಲಾದ ಈ ವರ್ಷದ ಕಂಬಳದಲ್ಲಿ ಒಟ್ಟು 9 ವಿಧದ ವಿವಿಧ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
ತುಳು ಸಂಸ್ಕೃತಿ ಮತ್ತು ಕಂಬಳದ ಪರಂಪರೆಯ ಮಹತ್ವವನ್ನು ನಗರದಲ್ಲಿ ಬೆಳೆದ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಸುಮಾರು 9 ವರ್ಷಗಳ ಹಿಂದೆ ಸಣ್ಣ ಮಟ್ಟದಲ್ಲಿ ಆರಂಭಗೊಂಡ ಮಂಗಳೂರು ಕಂಬಳ, ಇಂದು ಭಾರೀ ಜನೋತ್ಸವವಾಗಿ ರೂಪಾಂತರಗೊಂಡಿದೆ.
ಈ ವರ್ಷದ ಕಂಬಳವನ್ನು ಬೆಳಗ್ಗೆ 8.30ಕ್ಕೆ ಕಂಕನಾಡಿ ಬ್ರಹ್ಮಬೈದ್ಯರ್ಕಳ ಗರೋಡಿಯ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ ಅವರು ಉದ್ಘಾಟಿಸಿದರು.


























