ಪುತ್ತೂರು: ಹಿರಿಯ ನಾಗರಿಕ ದಂಪತಿ ರಾಧಮ್ಮ ಹಾಗೂ ಮುತ್ತು ಸ್ವಾಮಿ ಅವರು ಸೋಮವಾರ ಪುತ್ತೂರು ತಾಲೂಕು ಆಡಳಿತ ಸೌಧದ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದು, ರಾತ್ರಿಯೂ ಧರಣಿ ಮುಂದುವರಿಸಿದ್ದಾರೆ.
ಅಂಬೇಡ್ಕರ್ ಭಾವಚಿತ್ರದ ಪಕ್ಕದಲ್ಲಿ ದಾಖಲೆಗಳನ್ನು ಬ್ಯಾನರ್’ನಂತೆ ಅಳವಡಿಸಿದ್ದಾರೆ. ಪಕ್ಕದಲ್ಲೇ ಮನೆ ಕೆಡವಿದ ಅಧಿಕಾರಿಗಳ ವಿರುದ್ಧ ಖಂಡನೆ ಸೂಚಿಸಿದ್ದು, ಸೂಕ್ತ ನ್ಯಾಯಕ್ಕೆ ಆಗ್ರಹಿಸಿದ್ದಾರೆ.
ಪುತ್ತೂರು ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಾಧಮ್ಮ ಹಾಗೂ ಮುತ್ತುಸ್ವಾಮಿ. 2024ರ ನವಂಬರ್ 13ರಂದು ಅಧಿಕಾರಿಗಳು ಏಕಾಏಕೀ ಆಗಮಿಸಿ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮನವಿ ನೀಡಿದರೂ ಸಕಾರಾತ್ಮಕ ಸ್ಪಂದನೆ ದೊರಕಿಲ್ಲ. ಈ ನಿರ್ಲಕ್ಷ್ಯವನ್ನು ಖಂಡಿಸಿ, 2025ರ ಡಿಸೆಂಬರ್ 22ರಂದು ಬೆಳಿಗ್ಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದರು. ಆದರೆ ತಹಸೀಲ್ದಾರ್ ಆಗಮಿಸಿ, ಒಂದು ವಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ ವಾರ ಕಳೆದರೂ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸೋಮವಾರ ಬೆಳಗ್ಗಿನಿಂದ ವೃದ್ಧ ದಂಪತಿಗಳು ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದೇವೆ ಎಂದು ಮುತ್ತುಸ್ವಾಮಿ ತಿಳಿಸಿದರು.


























