ಕರಾವಳಿ

ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆ |ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿದ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ನ್ಯಾಯಾಲಯ ಸಂಕೀರ್ಣ ಶನಿವಾರ ಬೆಳಿಗ್ಗೆ ಲೋಕಾರ್ಪಣೆಗೊಂಡಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿ ಉದ್ಘಾಟನಾ ಕಾರ್ಯ ನೆರವೇರಿಸಿದರು.

chennai-shopping
maithri

ಪೊಲೀಸ್ ಗೌರವ ರಕ್ಷೆ ಸ್ಬೀಕರಿಸಿ ಆಗಮಿಸಿದ ಅತಿಥಿಗಳು ನೂತನ ನ್ಯಾಯಾಲಯದ ಫಲಕ ಅನಾವರಣ ಮಾಡಿ, ಬಳಿಕ ರಿಬ್ಬನ್ ಕತ್ತರಿಸಿದರು. ಒಳಭಾಗದಲ್ಲಿ ಇಟ್ಟಿದ್ದ ದೀಪವನ್ನು ಬೆಳಗಿಸಿ ನ್ಯಾಯಾಲಯಕ್ಕೆ ಚಾಲನೆ ನೀಡಲಾಯಿತು.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಮೂರ್ತಿ ಹೆಚ್.ಟಿ. ನರೇಂದ್ರ ಪ್ರಸಾದ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಸಭಾ ಕಾರ್ಯಕ್ರಮ ಆರಂಭಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts