tamanvi
ಕರಾವಳಿ

ಪಿಲಿಕುಳ ಪ್ರಾಣಿ ಸಂಗ್ರಾಲಯಕ್ಕೆ ಬೀಗ: ಹೈಕೋರ್ಟಿನ ಮಹತ್ವದ ಈ ಆದೇಶಕ್ಕೆ ಇದೆ ಕಾರಣ!!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕೈಕ ಪ್ರಾಣಿಗಳ ಸಂಗ್ರಹಾಲಯ ಆಗಿದ್ದ ಪಿಲಿಕುಳ ZOO ಇನ್ನು ನೆನಪು ಮಾತ್ರ.‌

ಆಡಳಿತದ ನಿರ್ಲಕ್ಷ್ಯ ಹಾಗೂ ಜವಾಬ್ದಾರಿಹೀನತೆಯ ಆರೋಪಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ತೀವ್ರ ಟೀಕೆಗೆ ಗುರಿಯಾಗಿದೆ. ಕರಾವಳಿಯ ಪ್ರಸಿದ್ಧ ZOO ನಲ್ಲಿ ನಡೆದಿರುವ ದುರುಪಯೋಗವನ್ನು ಕಂಡು ಆಘಾತಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳು ತಕ್ಷಣ ಪಿಲಿಕುಳ ZOO ಮುಚ್ಚುವಂತೆ ಆದೇಶಿಸಿದ್ದಾರೆ.

ಆಡಳಿತಾತ್ಮಕ ನಿರ್ಲಕ್ಷ್ಯದ ಕಾರಣದಿಂದ ಪಿಲಿಕುಳ ಪ್ರಾಣಿ ಸಂಗ್ರಹಾಲಯದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂದು ವರದಿಯಾಗಿದೆ. ಪ್ರಾಣಿಗಳ ಫೋಟೋಗಳನ್ನು ಪರಿಶೀಲಿಸಿದ ಹೈಕೋರ್ಟ್, ಅವುಗಳ ದುಸ್ಥಿತಿಯನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಪ್ರಾಣಿಗಳು ಈ ರೀತಿಯ ಸ್ಥಿತಿಯಲ್ಲಿ ಇದ್ದರೆ, ಉದ್ಯಾನವನವನ್ನು ತಕ್ಷಣವೇ ಬಂದ್ ಮಾಡಬೇಕು,” ಎಂದು ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದೆ.

ಇಲ್ಲಿನ ಪ್ರಾಣಿಗಳು ಹಲವು ವಿಧದ ಕಾಯಿಲೆಗಳಿಗೆ ತುತ್ತಾಗುತ್ತಿದೆ. ವನ್ಯಜೀವಿ ಸಂರಕ್ಷಣಾವಾದಿ ಭುವನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ, ನ್ಯಾಯಪೀಠವು ಪ್ರಾಣಿಗಳ ಫೋಟೋಗಳನ್ನು ಪರಿಶೀಲಿಸಿ ಗಂಭೀರ ಕಳವಳ ವ್ಯಕ್ತಪಡಿಸಿತು. ಅಸ್ವಚ್ಛ ಪರಿಸರ, ಹಾಗೂ ಪ್ರಾಣಿಗಳಿಗೆ ಅಗತ್ಯವಾದ ಸುರಕ್ಷತೆ ಮತ್ತು ಆರೈಕೆಯ ಕೊರತೆ ಬಗ್ಗೆ ನ್ಯಾಯಾಲಯ ಕಠಿಣ ನಿರ್ದೇಶನಗಳನ್ನು ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು, ಪುತ್ತೂರು, ಸುಳ್ಯದಲ್ಲಿ ಕೋರ್‌ ಮೆಗಾ ಸೇಲ್‌.. ರಿಫರ್ಬಿಶ್ಡ್ ಲ್ಯಾಪ್’ಟಾಪ್ ಖರೀದಿಗೆ ಸಿಗಲಿದೆ ಭರ್ಜರಿ ಆಫರ್ಸ್!!

ಮಂಗಳೂರು: ಪುತ್ತೂರು, ಸುಳ್ಯ ಹಾಗೂ ಮಂಗಳೂರಿನಲ್ಲಿ ಶಾಖೆಗಳನ್ನು ಹೊಂದಿರುವ ಕೋರ್ ಟೆಕ್ನಾಲಜೀಸ್…

ವ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣಕ್ಕೆ ಲೋಕ ಅದಾಲತ್: ಕಾನೂನು ಸಾಕ್ಷರತೆ, ಉಚಿತ ಕಾನೂನು ನೆರವಿನ ಅಭಿಯಾನ

ಪುತ್ತೂರು: ವ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣದ ಉದ್ದೇಶದಿಂದ ಕಾನೂನು ಸಾಕ್ಷರತೆ, ಉಚಿತ ಕಾನೂನು…