tamanvi
ಕರಾವಳಿ

ವಿದ್ಯುದ್ದೀಕರಣ ಪೂರ್ಣಗೊಳ್ಳುತ್ತಿದ್ದಂತೆ ಬೆಂಗಳೂರು – ಕರಾವಳಿಗೆ ಹೊಸ ವಂದೇ ಭಾರತ್: ರೈಲ್ವೆ ಸಚಿವ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕರಾವಳಿ ಭಾಗದ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಗುಡ್ ನ್ಯೂಸ್ ನೀಡಿದ್ದಾರೆ.

ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vande Bharat Express Train) ಪರಿಚಯಿಸಲಾಗುವುದು ಎಂದು ಅಧಿಕೃತ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನಿಂದ ಮಂಗಳೂರು ಮತ್ತು ಕಾರವಾರದ ಕರಾವಳಿ ನಗರಗಳನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನುಲೋಕಾರ್ಪಣೆಗೊಳಿಸಲಾಗುವುದು. ಬಾಕಿ ವಿದ್ಯುದೀಕರಣ ಪೂರ್ಣಗೊಳ್ಳುತ್ತಿದ್ದಂತೆ ಆಧುನಿಕ ರೈಲು ಕಾರ್ಯಾಚರಣೆ ನಡೆಸಲಿದೆ ಎಂದು ಅವರು ಪ್ರಕಟಿಸಿದರು. ಇದರಿಂದ ಪ್ರಯಾಣಿಕರ ಸಮಯ ಉಳಿತಾಯವಾಗಲಿದೆ. ವಿಶೇಷ ಅನುಭವ ನೀಡುವ ಹೆಚ್ಚುವರಿ ರೈಲು ಸಾರಿಗೆ ಈ ಭಾಗಕ್ಕೆ ಸಿಕ್ಕಂತಾಗುತ್ತದೆ ಎಂದರು.

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ಮಾರ್ಗದಲ್ಲಿ ವಿದ್ಯುದೀಕರಣ ಪೂರ್ಣಗೊಂಡಿದೆ. ಇನ್ನೂ ಹಾಸನ-ಮಂಗಳೂರು ವಿಭಾಗದ ನಡುವೆ ವಿದ್ಯುದ್ದೀಕರಣ ಕಾರ್ಯ ನಡೆಯುತ್ತಿದೆ. ಅದು ಮುಗಿಯುತ್ತಿದ್ದಂತೆ ಕಾರವಾರ-ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಸೇವೆ ಆರಂಭಿಸಲಿದೆ ಎಂದು ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts