tamanvi
ಕರಾವಳಿ

ವ್ಯಾಲೆಂಟೈನ್ ಡೇ ಹೆಸರಿನಲ್ಲಿ ನಡೆಯುವ ಅನಾಚಾರ ತಡೆಯಲು ಒತ್ತಾಯ! ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಪೀಳಿಗೆ ಭೋಗವಾದ ಮತ್ತು ಅನೈತಿಕತೆಯತ್ತ ಸಾಗುತ್ತಿದೆ. ‘ವ್ಯಾಲೆಂಟೈನ್ ಡೇ’ ಹಿನ್ನೆಲೆಯಲ್ಲಿ ಯುವತಿಯರ ಮೇಲಿನ ಕಿರುಕುಳ ಹಾಗೂ ಹಲವಾರು ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಚುನಾವಣಾ ತಹಶೀಲ್ದಾರ್ ದಯಾನಂದ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿ ಮನವಿ ಸಲ್ಲಿಸಿತು.

maithri

ಶಾಲಾ-ಕಾಲೇಜುಗಳಲ್ಲಿ ಮಾತ್ರವಲ್ಲದೆ, ಇತರ ಕಡೆಗಳಲ್ಲೂ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಈ ಮೂಲಕ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ವಕೀಲ ಈಶ್ವರ ಕೊಟ್ಟಾರಿ ಬಜಾಲ್, ಹಿಂದೂ ಜನಜಾಗೃತಿ ಸಮಿತಿಯ ಉಪೇಂದ್ರ ಆಚಾರ್ಯ, ರೋಹಿತ್ ಕೋಟ್ಯಾನ್, ಹಿಂದೂ ಮಹಾಸಭಾದ ಲೋಹಿತ್ ಸುವರ್ಣ, ಲೋಕೇಶ್ ಕುತ್ತಾರ್, ಪ್ರಮುಖರಾದ ದಿನೇಶ್ ಜಪ್ಪಿನಮೊಗರು, ದಿನಕರ್ ಬಜಾಲ್, ಭಾಸ್ಕರ ಆಚಾರ್ಯ, ಜಯಪ್ರಕಾಶ್ ಬಜಾಲ್, ಮಧುಸೂಧನ್ ಇನೋಳಿ ಮುಂತಾದವರು ಉಪಸ್ಥಿತರಿದ್ದರು.

ವ್ಯಾಲೆಂಟೈನ್ ಡೇ ವೇಳೆ ‘ಪಾರ್ಟಿಗಳಲ್ಲಿ’ ಯುವಕ-ಯುವತಿಯರು ಮದ್ಯಪಾನ, ಧೂಮಪಾನ, ಮಾದಕ ವಸ್ತುಗಳ ಸೇವನೆ ಮುಂತಾದ ಅನಾಚಾರಗಳಲ್ಲಿ ತೊಡಗುವುದು ಬೆಳಕಿಗೆ ಬಂದಿದೆ. ಇದಲ್ಲದೆ, ಈ ದಿನ ಗರ್ಭನಿರೋಧಕ ಸಾಮಗ್ರಿಗಳ ಹೆಚ್ಚಿನ ಮಾರಾಟವು ಅನೈತಿಕ ಸಂಬಂಧಗಳ ಹೆಚ್ಚಳವನ್ನು ತೋರಿಸುತ್ತದೆ. ಯುವತಿಯರನ್ನು ಸೆಳೆಯಲು ಅತಿ ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಅಲ್ಲದೆ, ಸುಳ್ಳು ಹೆಸರು ಹೇಳಿ ಯುವತಿಯರಿಗೆ ಮೋಸ ಮಾಡುವವರು ‘ಲವ್ ಜಿಹಾದ್’ ಮೂಲಕ ಅವರ ಬದುಕನ್ನು ಹಾಳು ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಫೆಬ್ರವರಿ 14ರಂದು ನಗರದಲ್ಲಿ ವಿಶೇಷ ಪೊಲೀಸ್ ಪಥಕ ನಿಯೋಜಿಸಬೇಕು. ಕಾಲೇಜು ಆವರಣಗಳಲ್ಲಿ ಕಾನೂನು ವಿರೋಧಿ ಕೃತ್ಯಗಳಲ್ಲಿ ತೊಡಗುವವರ ಮೇಲೆ ನಿಗಾ ಇಡಬೇಕು, ಅತಿವೇಗದಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ, ಆಪತ್ತಿನ ಸಂದರ್ಭಗಳಲ್ಲಿ ಯುವತಿಯರಿಗೆ ಸಹಾಯ ಮಾಡಲು ‘ವಿಶೇಷ ಹೆಲ್ಪ್‌ಲೈನ್ ನಂಬರ್’ ಅನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…