ಕರಾವಳಿ

ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ತೀವ್ರ ಶೋಧ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಇ-ಮೇಲ್ ಬಂದಿರುವ ಹಿನ್ನೆಲೆ, ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯಕ್ಕೂ ಬೆದರಿಕೆ ಸಂದೇಶ ಬಂದಿದೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

chennai-shopping
maithri

ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದ ಸುದ್ದಿ ತಿಳಿಯುತ್ತಿದ್ದಂತೆಯೇ ಕೂಡಲೇ ಕಾಯ್ದುಪ್ರವೃತ್ತರಾದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ನ್ಯಾಯಾಲಯದ ಆವರಣ, ಕೊಠಡಿಗಳು ಹಾಗೂ ವಾಹನ ನಿಲ್ದಾಣಗಳಲ್ಲಿ ತೀವ್ರ ಶೋಧ ನಡೆಸಿದರು.ಗಂಟೆಗಳ ಕಾಲ ನಡೆದ ತಪಾಸಣೆಯ ನಂತರ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ. ಮಂಗಳೂರು ನ್ಯಾಯಾಲಯಕ್ಕೆ ಈ ಹಿಂದೆಯೂ ಎರಡು ಬಾರಿ ಇಂತಹ ಬೆದರಿಕೆ ಇ-ಮೇಲ್‌ಗಳು ಬಂದಿದ್ದವು ಎಂಬುದು ಗಮನಾರ್ಹ.

ಈ ಕುರಿತಂತೆ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts