ಕರಾವಳಿ

ಡ್ರಗ್ಸ್ ಮುಕ್ತ ಕರ್ನಾಟಕದತ್ತ ಬಿಗಿ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ರಾಜ್ಯವನ್ನು ಡ್ರಗ್ಸ್ ಮುಕ್ತವಾಗಿಸುವ ದಿಸೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನಿರ್ಮಿಸಲಾಗುತ್ತಿರುವ ನೂತನ ವಸತಿ ಗೃಹಗಳ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಡ್ರಗ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡ್ರಗ್ಸ್ ಪ್ರಕರಣಗಳ ಪ್ರಮಾಣ ಮತ್ತು ಪೂರೈಕೆ ಎರಡೂ ಗಣನೀಯವಾಗಿ ಇಳಿಕೆಯಾಗಿರುವುದು ಗಮನಕ್ಕೆ ಬಂದಿದೆ ಎಂದರು.

ಕಾಲೇಜು ಆಡಳಿತ ಮಂಡಳಿಗಳ ಸಹಕಾರದೊಂದಿಗೆ ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವನೆ ತಡೆಗಟ್ಟಲು ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಯುವ ಸಮುದಾಯವನ್ನು ಈ ದುಷ್ಪ್ರವೃತ್ತಿಯಿಂದ ದೂರವಿಡಲು ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ಹೇಳಿದರು.

ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಪೋಷಕರ ಸಹಭಾಗಿತ್ವವೂ ಅಗತ್ಯವಿದೆ. ಮಕ್ಕಳ ನಡೆನುಡಿಗಳನ್ನು ಗಮನಿಸಿ, ಸರಿಯಾದ ಮಾರ್ಗದರ್ಶನ ನೀಡಿದರೆ ಈ ಪಿಡುಗಿನಿಂದ ಸಮಾಜವನ್ನು ಮುಕ್ತಗೊಳಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವತ್ತ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವರು ಪುನರುಚ್ಚರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ ಯೋಜನೆ!

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು…