tamanvi
ಕರಾವಳಿ

ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಿಎಂಗೆ ಮನವಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಹಾಗೂ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.

2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕಾಯ್ದಿರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕರಾವಳಿ ನಿಯಂತ್ರಣ ವಲಯ (CRZ) ಸುಧಾರಣೆ, ಬಂದರು ಮತ್ತು ಮೀನುಗಾರಿಕೆ ಮೂಲಸೌಕರ್ಯ, ಸಮಗ್ರ ಬೀಚ್ ಅಭಿವೃದ್ಧಿ, ಜಲಸಾರಿಗೆ, ಕೃಷಿ, ಆರೋಗ್ಯ, ರಸ್ತೆ ಮತ್ತು ಸಂಪರ್ಕ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಒಳಗೊಂಡಿದೆ.

ಕರಾವಳಿ ಅಭಿವೃದ್ಧಿ ಮಂಡಳಿಯನ್ನು ಮೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನೋಡಲ್ ಏಜೆನ್ಸಿಯಾಗಿ ಬಲಪಡಿಸುವುದು, ಪ್ರಮುಖ ಯೋಜನೆಗಳಿಗೆ ಹಂತವಾರು ಅನುಷ್ಠಾನ ವೇಳಾಪಟ್ಟಿ ರೂಪಿಸುವುದು ಹಾಗೂ ಪ್ರತಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ಶಿಫಾರಸು ಮಾಡಲಾಗಿದೆ.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಪೂರ್, ಮಾಜಿ ಸಚಿವ ರಮಾನಾಥ ರೈ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶಾಲೆಟ್ ಲವಿನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ಕೆ.ಎಸ್.ಆರ್.ಟಿ.ಸಿ ಮಾಜಿ ನಿರ್ದೇಶಕ ಟಿ.ಕೆ. ಸುಧೀರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…