ಕರಾವಳಿ

ಮಳೆ ಕೊರತೆ ಪರಿಣಾಮ: ಬಂಟ್ವಾಳದ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿತ

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ:ಈ ಬಾರಿ ಮಳೆ ಕೊರತೆಯಿಂದಾಗಿ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಪ್ರಮಾಣ ಅರ್ಧಕ್ಕಿಂತ ಕಡಿಮೆಯಾಗಿದೆ.
ಒಟ್ಟು 5.50 ಮೀಟರ್‌ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ಪ್ರಸ್ತುತ ಕೇವಲ ಸುಮಾರು 2.80 ಮೀಟರ್‌ ಮಟ್ಟದಲ್ಲಿ ಮಾತ್ರ ನೀರು ಸಂಗ್ರಹವಾಗಿದ್ದು, ಇದು ಸ್ಥಳೀಯ ರೈತರು ಹಾಗೂ ಜನರಿಗೆ ಆತಂಕಕ್ಕೆ ಕಾರಣವಾಗಿದೆ.ಪ್ರತಿವರ್ಷ ಮಳೆಗಾಲದ ನಂತರ ಅಣೆಕಟ್ಟಿನಲ್ಲಿ ಸಮರ್ಪಕವಾಗಿ ನೀರು ಸಂಗ್ರಹವಾಗುತ್ತಿತ್ತು. ಆದರೆ ಈ ಬಾರಿ ಮಳೆ ಕೊರತೆಯಿಂದ ನೀರಿನ ಮಟ್ಟದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಹಾಗೂ ನೀರಾವರಿ ವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.ಮುಂದಿನ ದಿನಗಳಲ್ಲಿ ಮಳೆಯ ಕೊರತೆ ಮುಂದುವರಿದಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

gl

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts