ಕರಾವಳಿ

ಮಂಗಳೂರಿನಲ್ಲಿ ಚಿರತೆ ಭೀತಿ: ನಾಗರೀಕರಲ್ಲಿ ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದಲ್ಲಿ ಚಿರತೆಗಳ ಓಡಾಟ ಹೆಚ್ಚುತ್ತಿರುವ ಆತಂಕದ ನಡುವೆ, ಕದ್ರಿ ದೇವಸ್ಥಾನ ಸಮೀಪದ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಬೆಳಕಿಗೆ ಬಂದಿದೆ.
ಫೆಬ್ರವರಿ 23ರ ಮಧ್ಯರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಚಿರತೆಯೊಂದು ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಅಡ್ಡಾಡುತ್ತಿರುವ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ಈ ದೃಶ್ಯಗಳು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಕದ್ರಿ ದೇವಸ್ಥಾನದ ಮೇಲ್ಭಾಗದಲ್ಲಿ ಸ್ವಲ್ಪ ಕಾಡು ಪ್ರದೇಶವಿರುವುದನ್ನು ಹೊರತುಪಡಿಸಿದರೆ, ಸುತ್ತಮುತ್ತ ಕಾಂಕ್ರೀಟ್ ಕಟ್ಟಡಗಳು, ಅಪಾರ್ಟ್‌ಮೆಂಟ್‌ಗಳು ಹಾಗೂ ವಿಲ್ಲಾ ಮಾದರಿಯ ಮನೆಗಳೇ ಹೆಚ್ಚಾಗಿವೆ. ಇಂತಹ ನಗರ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಅಚ್ಚರಿಗೂ ಕಾರಣವಾಗಿದೆ.ಎರಡು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಕಾಡುಕೋಣ ಪತ್ತೆಯಾಗಿದ್ದು, ಬಳಿಕ ಅದನ್ನು ಶಕ್ತಿನಗರ ಮಾರ್ಗವಾಗಿ ಕಾಡಿಗೆ ಹಿಂತಿರುಗಿಸಲಾಗಿತ್ತು. ವಾರದ ಹಿಂದೆ ಶಕ್ತಿನಗರ ಭಾಗದಲ್ಲಿಯೂ ಸಣ್ಣದಾದ ಚಿರತೆ ಕಾಣಿಸಿಕೊಂಡಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದೀಗ ಕದ್ರಿ ಭಾಗದಲ್ಲಿ ದೊಡ್ಡ ಮಾದರಿಯ ಚಿರತೆ ಕಾಣಿಸಿಕೊಂಡಿರುವುದು ನಗರ ನಿವಾಸಿಗಳಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಇತ್ತೀಚಿನ ದಿನಗಳಲ್ಲಿ ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ನಗರ ಪ್ರದೇಶಗಳಲ್ಲಿಯೇ ಅವುಗಳ ಓಡಾಟ ಸಾಮಾನ್ಯವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಸಾಮಾನ್ಯವಾಗಿ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಆಹಾರ ಅರಸಿಕೊಂಡು ಚಿರತೆಗಳು ನಾಡಿಗೆ ಬರುತ್ತವೆ. ಕಾಡಂಚಿನ ಪ್ರದೇಶಗಳಲ್ಲಿ ಕೋಳಿ, ನಾಯಿಗಳನ್ನು ಹೊತ್ತೊಯ್ದು ಆಹಾರಕ್ಕಾಗಿ ಚಲಿಸುತ್ತವೆ. ಈ ಅವಧಿಯಲ್ಲಿ ಚಿರತೆಗಳು ಒಂದು ರಾತ್ರಿಯಲ್ಲಿ ಕನಿಷ್ಠ 15ರಿಂದ 20 ಕಿಲೋಮೀಟರ್‌ಗಳಷ್ಟು ದೂರ ಸಂಚರಿಸುವ ಸಾಮರ್ಥ್ಯ ಹೊಂದಿರುವುದರಿಂದ, ಒಂದೇ ಪ್ರದೇಶದಲ್ಲಿ ಅವು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಸ್ತುತ, ಯಾರಿಗೂ ಚಿರತೆ ನೇರವಾಗಿ ಕಂಡುಬಂದಿಲ್ಲದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಅಧಿಕೃತ ದೂರು ನೀಡಲಾಗಿಲ್ಲ ಎನ್ನಲಾಗಿದೆ. ಆದರೆ, ನಗರದ ವಿವಿಧ ಭಾಗಗಳಲ್ಲಿ ಚಿರತೆಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಲಾಗಿದೆ.
=======================


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ತಿತ್ವಕ್ಕೆ | ಮಾರ್ಚ್ 3ರಂದು ಸಾಮೂಹಿಕ ಧರಣಿಗೆ ನಿರ್ಧಾರ!

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ "ಬ್ರಹ್ಮರಕೂಟ್ಲು ಟೋಲ್ ಗೇಟ್…

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ ಯೋಜನೆ!

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು…