ಕರಾವಳಿ

ವಿಧಾನಸೌಧದ ಮೆಟ್ಟಿಲೇ ಯಕ್ಷಗಾನಕ್ಕೆ ವೇದಿಕೆ: ಮೇನಲ್ಲಿ ಐತಿಹಾಸಿಕ ಪ್ರದರ್ಶನ!

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ರಾಜ್ಯದ ಸಂಪ್ರದಾಯಿಕ ಕಲೆಯಾದ ಯಕ್ಷಗಾನಕ್ಕೆ ಹೊಸ ಮೈಲುಗಲ್ಲು ಸ್ಥಾಪಿಸುವ ನಿಟ್ಟಿನಲ್ಲಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇದೇ ಮೊದಲ ಬಾರಿಗೆ ಯಕ್ಷಗಾನ ಪ್ರದರ್ಶನವನ್ನು ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.

ಈ ಮಹತ್ವದ ಕಾರ್ಯಕ್ರಮವನ್ನು ವಿಧಾನಸಭಾ ಸಚಿವಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಸಲಾಗುತ್ತಿದ್ದು, ಉಭಯ ತಿಟ್ಟುಗಳ ಖ್ಯಾತ ಯಕ್ಷಗಾನ ಕಲಾವಿದರು ಒಂದೇ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.ಈ ಕುರಿತು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದ ನಿಯೋಗವು ಇತ್ತೀಚೆಗೆ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ನಿಯೋಗದ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿದ ಸ್ಪೀಕರ್ ಅವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವಂತೆ ಪ್ರಸಿದ್ಧ ಯಕ್ಷಗಾನ ಕಲಾವಿದರನ್ನು ಒಳಗೊಂಡ ವಿಶೇಷ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು.ಭೇಟಿ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್., ಸದಸ್ಯರಾದ ಕೊಪ್ಪಲ ಮೋಹನ್ ಕದ್ರಿ, ಸುಧಾಕರ ಶೆಟ್ಟಿ ಮತ್ತು ಪುಟ್ಟಸ್ವಾಮಿ ಎ.ಆರ್. ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ತಿತ್ವಕ್ಕೆ | ಮಾರ್ಚ್ 3ರಂದು ಸಾಮೂಹಿಕ ಧರಣಿಗೆ ನಿರ್ಧಾರ!

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ "ಬ್ರಹ್ಮರಕೂಟ್ಲು ಟೋಲ್ ಗೇಟ್…

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ ಯೋಜನೆ!

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು…