tamanvi
ಕರಾವಳಿ

ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ: ಕಾರ್ಕಳದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾರ್ಕಳದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉದ್ಯೋಗಾವಕಾಶ ಕಲ್ಪಿಸುವ ಬದ್ಧತೆ ಸರ್ಕಾರಕ್ಕಿದ್ದು, ಒಳಮೀಸಲಾತಿ ಸಂಬಂಧಿತ ವಿಚಾರಗಳಿಂದ ನೇಮಕಾತಿಯಲ್ಲಿ ವಿಳಂಬ ಉಂಟಾಗಿತ್ತು. ಇದೀಗ ಅಗತ್ಯ ಕ್ರಮಗಳನ್ನು ಕೈಗೊಂಡು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.

ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿರುವ ಆನೆ ದಾಳಿ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ. ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸದಂತೆ ಕಾಡಂಚಿನ ಪ್ರದೇಶಗಳಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ವಾರ್ಷಿಕವಾಗಿ ಸುಮಾರು 52 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದ್ದರೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಈಗಾಗಲೇ 1.20 ಲಕ್ಷ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಆಗುಂಬೆ ಸುರಂಗ ಮಾರ್ಗ ನಿರ್ಮಾಣ ಕುರಿತು ಪರಿಸರವಾದಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯ ಅನುಮತಿ ಪಡೆಯಲಾಗುವುದು ಎಂದರು. ಕಾರ್ಕಾಳದಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಯಲಿದೆ ಎಂದು ಸಿಎಂ ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…