ಕರಾವಳಿ

ಕರ್ನಾಟಕ ಕರಾವಳಿಯಲ್ಲಿ 500 ಮೆಗಾವ್ಯಾಟ್ ‘ಎಐ ಡೇಟಾ ಹಬ್’ ಸ್ಥಾಪನೆಗೆ ಯೋಜನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗವನ್ನು 500 ಮೆಗಾವ್ಯಾಟ್ ಸಾಮರ್ಥ್ಯದ ಎಐ ಡೇಟಾ ಹಬ್ ಆಗಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.ಬೆಂಗಳೂರಿನ ಖನಿಜ ಭವನದಲ್ಲಿ ನಡೆದ ಇ.ಎಸ್.ಡಿ.ಎಂ ಮತ್ತು ಕೋರ್ ಮ್ಯಾನಫ್ಯಾಕ್ಚರಿಂಗ್ ವಿಷನ್ ಗ್ರೂಪ್ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೈಪರ್‌ಸ್ಕೇಲರ್ ಹಾಗೂ ಮಧ್ಯಮ ಸಾಮರ್ಥ್ಯದ ಡೇಟಾ ಸೆಂಟರ್‌ಗಳನ್ನು ಸ್ಥಾಪಿಸಲು ಅನುಕೂಲಕರ ವಾತಾವರಣ ಸೃಷ್ಟಿಸಲಾಗುವುದು ಎಂದರು. 25ರಿಂದ 200 ಮೆಗಾವ್ಯಾಟ್ ಸಾಮರ್ಥ್ಯದ ಡೇಟಾ ಕೇಂದ್ರಗಳನ್ನು ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಅಭಿವೃದ್ಧಿಪಡಿಸುವ ಉದ್ದೇಶವೂ ಇದೆ ಎಂದು ತಿಳಿಸಿದರು.

chennai-shopping
maithri

ಕರಾವಳಿಯಲ್ಲಿ ಎಐ ಡೇಟಾ ಸೆಂಟರ್ ಸ್ಥಾಪನೆಗೆ ಸಂಬಂಧ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಮಂಗಳೂರಿನಲ್ಲಿ ಕೇಬಲ್ ಲ್ಯಾಂಡಿಂಗ್ ಸ್ಟೇಷನ್ ಸ್ಥಾಪನೆ ಕುರಿತೂ ಅಧ್ಯಯನ ನಡೆಯಲಿದೆ ಎಂದರು.ಇ.ಎಸ್.ಡಿ.ಎಂ ವಲಯದ ಜಾಗತಿಕ ಕಂಪನಿಗಳು 25 ರಿಂದ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಆಸಕ್ತಿ ತೋರಿದ್ದು, ಈ ಹೂಡಿಕೆಯನ್ನು ರಾಜ್ಯಕ್ಕೆ ಸೆಳೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.

ಅಗತ್ಯ ಮೂಲಸೌಕರ್ಯ, ಪರೀಕ್ಷಾ ಸೌಲಭ್ಯ, ಪ್ಯಾಕೇಜಿಂಗ್ ಮತ್ತು ವಿಶೇಷ ಉಗ್ರಾಣ ವ್ಯವಸ್ಥೆ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಹೇಳಿದರು.ಡೇಟಾ ಸೆಂಟರ್ ಕ್ಲಸ್ಟರ್ ಮಾದರಿಯನ್ನು ಅಧ್ಯಯನ ಮಾಡಲು ಅಮೆರಿಕಾ ಮತ್ತು ಮಲೇಷ್ಯಾಕ್ಕೆ ಉನ್ನತ ಮಟ್ಟದ ನಿಯೋಗ ಕಳುಹಿಸುವ ವಿಚಾರವೂ ಚರ್ಚೆಯಾಗಿದೆ.

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…