ಕರಾವಳಿ

ಮಾ.1 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಎಚ್‌.ಡಿ. ದೇವೇಗೌಡ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್‌. ಡಿ.ದೇವೆಗೌಡ ಅವರು ಮಾರ್ಚ್ 1 ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಮಾರ್ಚ್ 1ರಂದು ಸಂಜೆ 5.20ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅವರು ಬಿಳಿನೆಲೆ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ಸಂಜೆ 6 ಗಂಟೆಗೆ ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.

ಅಂದು ರಾತ್ರಿ ಸುಬ್ರಹ್ಮಣ್ಯದಲ್ಲಿನ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವ ಅವರು, ಮಾರ್ಚ್ 2ರಂದು ಬೆಳಿಗ್ಗೆ 6 ಗಂಟೆಗೆ ಮತ್ತೆ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ, ಮಧ್ಯಾಹ್ನ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವ ಕಾರ್ಯಕ್ರಮ ನಿಗದಿಯಾಗಿದೆ.ಈ ಪ್ರವಾಸದ ಅವಧಿಯಲ್ಲಿ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ತಿತ್ವಕ್ಕೆ | ಮಾರ್ಚ್ 3ರಂದು ಸಾಮೂಹಿಕ ಧರಣಿಗೆ ನಿರ್ಧಾರ!

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ "ಬ್ರಹ್ಮರಕೂಟ್ಲು ಟೋಲ್ ಗೇಟ್…

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ ಯೋಜನೆ!

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು…