ಕರಾವಳಿ

ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ? ಅಧ್ಯಯನ ಸಮಿತಿಯ ವರದಿ ಸರ್ಕಾರಕ್ಕೆ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು:ಕರ್ನಾಟಕದಲ್ಲಿ ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಈ ಸಂಬಂಧ ಸರ್ಕಾರ ನೇಮಿಸಿದ್ದ ಅಧ್ಯಯನ ಸಮಿತಿಯು ತನ್ನ ಸಮಗ್ರ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಲ್ಲಿಸಿದೆ.

ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವಾಗ ಅನುಸರಿಸಿದ ವಿಧಾನಗಳು ಹಾಗೂ ಮಾನದಂಡಗಳನ್ನು ಮಾದರಿಯಾಗಿ ಪರಿಗಣಿಸಿ ಸಮಿತಿಯು ಅಧ್ಯಯನ ನಡೆಸಿದೆ. ಜನವರಿ 19 ಮತ್ತು 20ರಂದು ಆಂಧ್ರಪ್ರದೇಶದ ಸಚಿವಾಲಯ ಹಾಗೂ ವಿವಿಧ ಇಲಾಖೆಗಳ ಭೇಟಿ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಮ್. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಈ 6 ಸದಸ್ಯರ ಸಮಿತಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಮಿತಿಯು ವಿಕಾಸ ಸೌಧದಲ್ಲಿ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ ಅವರಿಗೆ ವರದಿ ಸಲ್ಲಿಸಿದ್ದು, ತುಳು ಭಾಷೆಯ ಹಿನ್ನೆಲೆ ಹಾಗೂ ಚರಿತ್ರೆಯ ಪ್ರಸ್ತಾವನೆಯನ್ನು ಸಹ ಸೇರಿಸಲಾಗಿದೆ.
ಈ ಸಂದರ್ಭದಲ್ಲಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಅಧ್ಯಯನ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಕುರಿತು ಸರ್ಕಾರದ ಮುಂದಿನ ಕ್ರಮಗಳ ಬಗ್ಗೆ ತುಳುವರಲ್ಲಿ ಕುತೂಹಲ ಹೆಚ್ಚಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸುಳ್ಯದ ಇಬ್ಬರ ಸಾವು ಪ್ರಕರಣ: ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ತೋಟದ ಮಾಲಕರ ವಿರುದ್ಧ ಪ್ರಕರಣ ದಾಖಲು!!

ಸುಳ್ಯ: ವಿದ್ಯುತ್ ಪ್ರವಹಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ತೋಟದ ಮಾಲಕರ ವಿರುದ್ಧ ಬೆಳ್ಳಾರೆ…