ಕರಾವಳಿ

ಇಂಧನ ಕೊರತೆ ಇಲ್ಲ: ಸಾರ್ವಜನಿಕರು ಆತಂಕಪಡಬೇಡಿ | ಆಲ್ ಇಂಡಿಯಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಕೆ. ವಿಶ್ವಾಸ್ ಶೆಣೈ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದೇಶದಲ್ಲಿ ಇಂಧನದ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ಪ್ರಕೃತಿ ಅನಿಲ ಸಚಿವರಾದ ಹರ್‌ದೀಪ್ ಸಿಂಗ್ ಪುರಿ ಅವರ ವೈಯಕ್ತಿಕ ಕಾರ್ಯದರ್ಶಿ ರಸ್ಸಲ್ ದ್ವಿವೇದಿ ಸ್ಪಷ್ಟಪಡಿಸಿದ್ದಾರೆ ಎಂದು ಆಲ್ ಇಂಡಿಯಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್‌ನ ಕಾರ್ಯದರ್ಶಿ ಕೆ. ವಿಶ್ವಾಸ್ ಶೆಣೈ ತಿಳಿಸಿದ್ದಾರೆ.

chennai-shopping
Shani-pooja

ಈ ಕುರಿತು ದೂರವಾಣಿ ಮೂಲಕ ಮಾತನಾಡಿದ ಸಂದರ್ಭದಲ್ಲಿ, ದೇಶಕ್ಕೆ ಅಗತ್ಯವಾದ ಕಚ್ಚಾ ತೈಲವನ್ನು ರಷ್ಯಾ ಸೇರಿದಂತೆ ವಿವಿಧ ಮೂಲಗಳಿಂದ ಸಮರ್ಪಕವಾಗಿ ಆಮದು ಮಾಡಿಕೊಳ್ಳಲಾಗುತ್ತಿದ್ದು, ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

ಯಾವುದೇ ವದಂತಿಗಳಿಗೆ ಕಿವಿಗೊಡದೆ ಡೀಲರ್‌ಗಳು ತಮ್ಮ ಔಟ್‌ಲೆಟ್‌ಗಳನ್ನು ಸಾಮಾನ್ಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸಾರ್ವಜನಿಕರು ಹಾಗೂ ವಾಹನ ಸವಾರರು ಆತಂಕಪಡುವ ಅಗತ್ಯವಿಲ್ಲದೆ ಶಾಂತವಾಗಿ ಸಹಕರಿಸುವಂತೆ ಕೆ. ವಿಶ್ವಾಸ್ ಶೆಣೈ ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts