tamanvi
ಕರಾವಳಿ

ಪುತ್ತೂರು ಸೇರಿದಂತೆ ಕರಾವಳಿಯ ಈ ತಾಲೂಕುಗಳಲ್ಲಿ ಇಂದಿನಿಂದ ತಾಪಮಾನ ಏರಿಕೆ: ಮುನ್ಸೂಚನೆ!!

ಈ ಸುದ್ದಿಯನ್ನು ಶೇರ್ ಮಾಡಿ

ದ.ಕ. ಜಿಲ್ಲೆಯ ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ, ಪುತ್ತೂರು, ಕಡಬ ಹಾಗೂ ಉಡುಪಿ ತಾಲೂಕಿನ ಬ್ರಹ್ಮಾವರ, ಹೆಬ್ರಿ, ಕಾರ್ಕಳ ತಾಲೂಕಿನಲ್ಲಿ ಏ. 21ರಿಂದ 23ರವರೆಗೆ ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ)ವು ಈ ಬಗ್ಗೆ ಸೋಮವಾರ ಮುನ್ಸೂಚನೆ ನೀಡಿದೆ.

ಕೆಲವು ದಿನಗಳಿಂದ ಜಿಲ್ಲೆಯ ಹಲವೆಡೆ ತಾಪಮಾನ 37 ಡಿ.ಸೆ.ಗೂ ಏರಿಕೆ ಕಾಣುತ್ತಿದೆ. ತಾಪಮಾನ ಏರಿಕೆಯ ಜೊತೆಗೆ ತೀವ್ರ ಉಷ್ಣತೆಯ ಅಪಾಯವು ಈ ತಾಲೂಕು ವ್ಯಾಪ್ತಿಯಲ್ಲಿ ಕಾಡುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…