tamanvi
ಕರಾವಳಿ

ಬಿ.ಸಿ.ರೋಡ್: ರೈಲಿನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಪ್ರಯಾಣಿಕರು!!

ಈ ಸುದ್ದಿಯನ್ನು ಶೇರ್ ಮಾಡಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರಿಗೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರೈಲಿನಲ್ಲೇ ಮಹಿಳಾ ಪ್ರಯಾಣಿಕರು ಹೆರಿಗೆ ಮಾಡಿಸಿದ ಘಟನೆ ವರದಿಯಾಗಿದೆ.

ಭಾನುವಾರ ಸಂಜೆ ಘಟನೆ ನಡೆದಿದ್ದು, ಕಾರವಾರ – ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ರೈಲು ಇದಾಗಿತ್ತು. ಗರ್ಭಿಣಿಯನ್ನು ಮೈಸೂರು ಮೂಲದವರು ಎಂದು ಗುರುತಿಸಲಾಗಿದೆ.

ಮಂಗಳೂರು ಜಂಕ್ಷನಿಂದ ಹೊರಟ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಸಹಜ ಹೆರಿಗೆ ಮಾಡಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವೂ ಆಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಹಾಗೇ ಸುಮಾರು 30 ನಿಮಿಷಗಳ ಕಾಲ ವೈದ್ಯರಿಗಾಗಿ ಕಾಯಲಾಯಿತು. ಆದರೆ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಲಭಿಸದ ಕಾರಣ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಕಾರ್ಯಪ್ರವೃತ್ತರಾಗಿ ಸಹಜ ಹೆರಿಗೆ ಮಾಡಿಸಿದರು ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…