tamanvi
ಕರಾವಳಿ

ಸುರಕ್ಷತಾ ನಿಯಮ ನಿರ್ಲಕ್ಷಿಸುವ ಕೆಎಸ್‌ಆರ್‌ಟಿಸಿ ಚಾಲಕರಿಂದ ಸಾರ್ವಜನಿಕರಿಗೆ ಅಪಾಯ: ಕಠಿಣ ಕ್ರಮಕ್ಕಾಗಿ ನಿಗಮದ ಎಂಡಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಪತ್ರ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ, ಅವೈಜ್ಞಾನಿಕವಾಗಿ ಬಸ್ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗಿದೆ ಎಂದು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಚಾಲಕರ ಬೇಜವಾಬ್ದಾರಿತನ ಹಾಗೂ ನಿಯಮ ಬಾಹಿರ ನಡವಳಿಕೆಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಸ್ತೆ ಮಧ್ಯದಲ್ಲೇ ಬಸ್ ನಿಲುಗಡೆ:
ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಬಸ್‌ಗಳು ಪುತ್ತೂರಿನ ಮುರ, ನೆಹರು ನಗರ, ಮಂಜಲ್ಪುವಿನಂತಹ ಜನನಿಬಿಡ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಜಾಗವಿದ್ದರೂ ಸಹ, ರಸ್ತೆಯ ಮಧ್ಯಭಾಗದಲ್ಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿ-ಇಳಿಸುತ್ತಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ 75ರ ಸೂರಿಕುಮೇರಿ ಬಳಿ ಸುಸಜ್ಜಿತವಾದ ಸರ್ವಿಸ್ ರಸ್ತೆ ಲಭ್ಯವಿದ್ದರೂ, ಚಾಲಕರು ಮುಖ್ಯ ರಸ್ತೆಯಲ್ಲೇ ಬಸ್ ನಿಲ್ಲಿಸುತ್ತಿರುವುದು ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವಂತಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇಂಡಿಕೇಟರ್ ಬಳಸದ ಚಾಲಕರು:
ಬಸ್ ಚಾಲಕರು ರಸ್ತೆ ಬದಿಗೆ ಅಥವಾ ತಿರುವುಗಳಲ್ಲಿ ವಾಹನವನ್ನು ತಿರುಗಿಸುವಾಗ ಯಾವುದೇ ಇಂಡಿಕೇಟರ್‌ಗಳನ್ನು (Indicators) ಹಾಕುತ್ತಿಲ್ಲ. ಇದರಿಂದ ಹಿಂದಿನಿಂದ ಬರುವ ವಾಹನ ಸವಾರರು ಗೊಂದಲಕ್ಕೀಡಾಗಿ ಭೀಕರ ಅಪಘಾತಗಳು ಸಂಭವಿಸುತ್ತಿವೆ. ಚಾಲಕರ ಈ ಓವರ್‌ಟೇಕ್ ಮಾಡುವ ಭರಾಟೆ ಮತ್ತು ಅಸಡ್ಡೆಯಿಂದಾಗಿ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ, ಪ್ರಾಣಹಾನಿಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಅವರು ದೂರಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕರಿಂದ ಈ ಬಗ್ಗೆ ಸಾಲು ಸಾಲು ದೂರುಗಳು ಬರುತ್ತಿವೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಚಾಲಕರಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಬೇಕು ಎಂದು ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಕೆಎಸ್‌ಆರ್‌ಟಿಸಿ ಆಡಳಿತ ಮಂಡಳಿಗೆ ಆಗ್ರಹಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…