ಕರಾವಳಿ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಕೆ.ಎಸ್. ಪ್ರಭಾಕರ್ IAS ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಮಂಗಳೂರು ಕೇಂದ್ರ ಕಚೇರಿ ವಿಶ್ವ ಸೌಧಕ್ಕೆ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ IAS ಅವರು ಮೇ 19ರಂದು ಭೇಟಿ ನೀಡಿದರು.

gl

ಸಂಸ್ಥೆಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಹಾಗೂ ಆಡಳಿತ ಮಂಡಳಿ ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕರು ಸ್ವಾಗತಿಸಿ, ಗೌರವಿಸಿ ಸನ್ಮಾನಿಸಿದರು.

ಸಂಸ್ಥೆಯ ಆರ್ಥಿಕ ಸ್ಥಿತಿಗತಿಗಳನ್ನು ಮತ್ತು ನಡೆದು ಬಂದ ದಾರಿಯನ್ನು ಪರಿಶೀಲಿಸಿ ದಕ್ಷಿಣ ಕನ್ನಡದಲ್ಲಿ ತನ್ನ ವಿಶಿಷ್ಟ ಛಾಪನ್ನು ಮೂಡಿಸಿದ ಸಂಸ್ಥೆ ಹಾಗೂ ಕಾರ್ಯಾಚರಣೆ ಮತ್ತು ಪ್ರಮುಖ ಸಾಮರ್ಥ್ಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಶ್ಲಾಘಿಸಿದರು. ಸಂಸ್ಥೆಯ ಸ್ಥಾಪಕಾಧ್ಯಕ್ಷ ದಿ| ಪಾಲ್ಕೆ ಬಾಬುರಾಯ ಆಚಾರ್ಯರ ನೇತೃತ್ವದಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆಯ ಹೆಸರು ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು.

ನಿರ್ದೇಶಕರಾದ ವಿ. ಜಯ ಆಚಾರ್, ಕೆ. ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಚಂದ್ರಶೇಖರ್ ಎ.ಎಸ್., ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts