tamanvi
ಕರಾವಳಿ

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಸಂಸ್ಥೆಯ ನೂತನ ಮೊಬೈಲ್ ಟವರನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆ ಉದ್ಘಾಟಿಸಿ ಶುಭ ಹಾರೈಸಿದರು.

ಇದರಿಂದಾಗಿ ಇಲ್ಲಿನ ನೌಕರರು, ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಹಾಗೂ ಸಂದರ್ಶಕರಿಗೆ ಉತ್ತಮ ಗುಣಮಟ್ಟದ ಇಂಟರ್‌ನೆಟ್ ಮತ್ತು ಮೊಬೈಲ್ ಸಂಪರ್ಕ ಸೌಲಭ್ಯ ಲಭ್ಯವಾಗುತ್ತದೆ. ಇದರೊಂದಿಗೆ ಆನ್‌ಲೈನ್ ಶಿಕ್ಷಣ, ಡಿಜಿಟಲ್ ವಾಣಿಜ್ಯ, ತ್ವರಿತ ಸಂವಹನ, ಉದ್ಯಮ ನಿರ್ವಹಣೆ ಹಾಗೂ ಗ್ರಾಹಕರ ಸೇವೆಗಳ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ.

ಜಿಯೋ ಸಂಸ್ಥೆಯ ಹಿರಿಯ ಅಧಿಕಾರಿ ರಾಜೇಶ್ ಮತ್ತು ಡಿ.ಜಿ.ಎಂ. ಧನಂಜಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ಧನ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…