ಕರಾವಳಿ

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಈ ಸುದ್ದಿಯನ್ನು ಶೇರ್ ಮಾಡಿ

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.

ಕೆಮ್ಮಣ್ಣು ನಿವಾಸಿ ಗೋಪಾಲಕೃಷ್ಣ(65) ಹಾಗೂ ಶ್ಯಾಮಲಾ (60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಮನೆ ಸಮೀಪದ ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದರೆನ್ನಲಾಗಿದೆ.

ಇದನ್ನು ಗಮನಿಸಿದ ಅವರ ಪತಿ ಗೋಪಾಲಕೃಷ್ಣ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದರೆಂದು ತಿಳಿದುಬಂದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಗೆ ಬಿದ್ದ ದಂಪತಿಯನ್ನು ಹಗ್ಗದ ನೆರವಿನೊಂದಿಗೆ ಮೇಲಕ್ಕೆತ್ತಿದ್ದಾರೆ.

ತೀವ್ರವಾಗಿ ಅಸ್ವಸ್ಥಗೊಂಡ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸುಳ್ಯದ ಇಬ್ಬರ ಸಾವು ಪ್ರಕರಣ: ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ತೋಟದ ಮಾಲಕರ ವಿರುದ್ಧ ಪ್ರಕರಣ ದಾಖಲು!!

ಸುಳ್ಯ: ವಿದ್ಯುತ್ ಪ್ರವಹಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ತೋಟದ ಮಾಲಕರ ವಿರುದ್ಧ ಬೆಳ್ಳಾರೆ…